ಗುರುವಾರ , ಡಿಸೆಂಬರ್ 1, 2022
20 °C

ಬಾಲಕಿ ಮೇಲೆ ಅತ್ಯಾಚಾರ: 8 ಮಂದಿಗೆ ಜೀವಾವಧಿ ಶಿಕ್ಷೆ

ಪಿಟಿಐ Updated:

ಅಕ್ಷರ ಗಾತ್ರ : | |

ಚೆನ್ನೈ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ವೇಶ್ಯಾವಾಟಿಕೆಗೆ ತಳ್ಳಿದ ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೊ ವಿಶೇಷ ನ್ಯಾಯಾಲಯವು ಬಾಲಕಿಯ ಮಲತಂದೆ ಹಾಗೂ ಮಲತಾಯಿ ಸೇರಿ ಒಟ್ಟು 8 ಮಂದಿಗೆ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ. 

ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್‌ ಇನ್‌ಸ್ಪೆಕ್ಟರ್‌, ಬಿಜೆಪಿಯ ಇಬ್ಬರು ಕಾರ್ಯಕರ್ತರು ಹಾಗೂ ಖಾಸಗಿ ಸುದ್ದಿವಾಹಿನಿಯೊಂದರ ಪತ್ರಕರ್ತನಿಗೆ ತಲಾ 20 ವ‌ರ್ಷ ಸೆರೆವಾಸ ವಿಧಿಸಿದೆ. ಸರ್ಕಾರದ ವತಿಯಿಂದ ಸಂತ್ರಸ್ತೆಗೆ ₹5 ಲಕ್ಷ ನೆರವು ನೀಡಬೇಕು. ಆರೋಪಿಗಳಿಗೆ ವಿಧಿಸಲಾಗಿರುವ ಸುಮಾರು ₹2 ಲಕ್ಷ ದಂಡದ ಮೊತ್ತವನ್ನೂ ಆಕೆಗೆ ಒದಗಿಸಬೇಕು ಎಂದು ನ್ಯಾಯಾಲಯ ಹೇಳಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು