ಬುಧವಾರ, ನವೆಂಬರ್ 25, 2020
19 °C

ಆಕಸ್ಮಿಕವಾಗಿ ಹಾರಿದ ಗುಂಡು: ಕಾನ್‌ಸ್ಟೆಬಲ್‌ ಸಾವು

ಪಿಟಿಐ/ಎಎಫ್‌ಪಿ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಆಕಸ್ಮಿಕವಾಗಿ ಹಾರಿದ ಗುಂಡಿನಿಂದ ವಿಶೇಷ ರಕ್ಷಣಾ ಪಡೆ (ಎಸ್‌ಪಿಎಫ್‌) ಕಾನ್‌ಸ್ಟೆಬಲ್‌ ಒಬ್ಬರು ಭಾನುವಾರ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ರಾಣಿಗಂಜ್‌ನಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್‌ನ ರಕ್ಷಣೆಗಾಗಿ ಕಾನ್‌ಸ್ಟೆಬಲ್‌ ಅವರನ್ನು ನಿಯೋಜಿಸಲಾಗಿತ್ತು. ರೈಫಲ್‌ನಿಂದ ಆಕಸ್ಮಿಕವಾಗಿ ಹಾರಿದ ಗುಂಡು ಕಾನ್‌ಸ್ಟೆಬಲ್‌ ಗಲ್ಲವನ್ನು ಛಿದ್ರಗೊಳಿಸಿದೆ. ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಅವರು ವಿವರಿಸಿದ್ದಾರೆ.

ಇತರ ಮೂವರು ಸಿಬ್ಬಂದಿ ಅವಘಡ ನಡೆದ ಸ್ಥಳದಲ್ಲಿಯೇ ಇದ್ದರು. ಅವರಿಂದ ಹೇಳಿಕೆ ಪಡೆಯಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು