ಶನಿವಾರ, ಜನವರಿ 23, 2021
18 °C
ರೈತರ ಪ್ರತಿಭಟನೆ ಬೆಂಬಲಿಸಿ ಕಾರ್ಯಕರ್ತರೊಂದಿಗೆ ಲಖನೌದಲ್ಲಿ ಪ್ರತಿಭಟನೆ

ಧರಣಿ ನಿರತ ಅಖಿಲೇಶ್ ಯಾದವ್ ಅವರನ್ನು ವಶಕ್ಕೆ ಪಡೆದ ಪೊಲೀಸರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ನೂತನ ಕೃಷಿ ಕಾಯ್ದೆಗಳ ರದ್ದತಿಗಾಗಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಸೋಮವಾರ ಭದ್ರತೆಯನ್ನು ಭೇದಿಸಿ ಪಕ್ಷದ ಕಾರ್ಯಕರ್ತರೊಂದಿಗೆ ರಸ್ತೆಯಲ್ಲೇ ಧರಣಿ ಕುಳಿತಿದ್ದ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಧರಣಿ ನಡೆಸುವುದನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಇಲ್ಲಿನ ಸಮಾಜವಾದಿ ಪಕ್ಷದ ಕೇಂದ್ರ ಕಚೇರಿ ಸುತ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಆ ಪೊಲೀಸ್ ರಕ್ಷಣೆಯನ್ನು ಭೇದಿಸಿ ಪಕ್ಷದ ಕಾರ್ಯಕರ್ತರೊಂದಿಗೆ ಅಖಿಲೇಶ್ ಯಾದವ್ ಧರಣಿ ನಡೆಸಲು ಮುಂದಾದರು. ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿ ಕರೆದೊಯ್ದರು.

‘ಹೊಸ ಕೃಷಿ ಕಾಯ್ದೆಗಳು ರೈತರಿಗೆ ನೆರವಾಗುವುದಾಗಿದ್ದರೆ, ಅವರು ಏಕೆ ಇಷ್ಟೆಲ್ಲ ಪ್ರತಿಭಟನೆ ಮಾಡುತ್ತಿದ್ದರು ? ಇಷ್ಟೆಲ್ಲ ಪ್ರತಿಭಟನೆ ನಡೆದರೂ ಸರ್ಕಾರ ಏಕೆ ತನ್ನ ನಿಲುವನ್ನು ಬದಲಿಸಿಕೊಂಡಿಲ್ಲ ? ರೈತರು ಹೊಸ ಕಾಯ್ದೆಗಳನ್ನು ತಿರಸ್ಕರಿಸುತ್ತಿರುವಾಗ, ಸರ್ಕಾರ ತಮ್ಮ ನಿಲುವಿನಿಂದ ಹಿಂದಕ್ಕೆ ಸರಿಯಬೇಕು‘ ಎಂದು ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು