ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಭೀರ ಅಪರಾಧಗಳಲ್ಲಿ ಭಾಗಿಯಾದರೆ ಸೇವೆಯಿಂದ ವಜಾ –ಯೋಗಿ ಆದಿತ್ಯನಾಥ್

Last Updated 30 ಸೆಪ್ಟೆಂಬರ್ 2021, 12:14 IST
ಅಕ್ಷರ ಗಾತ್ರ

ಲಖನೌ : ಪೊಲೀಸ್‌ ಅಧಿಕಾರಿಗಳ ಕಾನೂನುಬಾಹಿರ ಚಟುವಟಿಕೆಗಳನ್ನು ಒಪ್ಪಲಾಗದು. ಅತ್ಯಂತ ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರನ್ನು ಸೇವೆಯಿಂದ ವಜಾಗೊಳಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗುರುವಾರ ಎಚ್ಚರಿಕೆ ನೀಡಿದ್ದಾರೆ.

ಕಾನ್ಪುರದ ಉದ್ಯಮಿ ಗೋರಖ್‌ಪುರದ ಹೋಟೆಲ್‌ನಲ್ಲಿ ಸಾವನ್ನಪ್ಪಿದ ಘಟನೆ ನಂತರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿರೋಧ ಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ಇದರ ಬೆನ್ನಲ್ಲೆ ಮುಖ್ಯಮಂತ್ರಿ ಅವರು ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ.

ಉದ್ಯಮಿ ಮನೀಶ್‌ ಗುಪ್ತಾ (36) ಕೆಲವು ಪೊಲೀಸರ ಥಳಿತದಿಂದ ಸೋಮವಾರ ರಾತ್ರಿ ಮೃತಪಟ್ಟಿದ್ದರು ಎನ್ನಲಾಗಿದೆ. ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆ ಒತ್ತಾಯ ಕೇಳಿಬಂದಿದೆ.

ಈ ಕುರಿತು ಮುಖ್ಯಮಂತ್ರಿ ಅವರು ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇತ್ತೀಚಿನ ದಿನಗಳಲ್ಲಿ ಕೆಲವು ಪೊಲೀಸ್‌ ಅಧಿಕಾರಿಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ದೂರುಗಳು ಬಂದಿವೆ. ಅಂತಹವರಿಗೆ ಪೊಲೀಸ್‌ ಇಲಾಖೆಯಲ್ಲಿ ಯಾವುದೇ ಸ್ಥಾನವಿರಬಾರದು. ಕಾನೂನಿನ ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪುರಾವೆಗಳೊಂದಿಗೆ ಅಂತಹ ಅಧಿಕಾರಿಗಳ ಪಟ್ಟಿಯನ್ನು ಒದಗಿಸುವಂತೆ ಆದಿತ್ಯನಾಥ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು ಎಂದು ಪ್ರಕಟಣೆ ತಿಳಿಸಿದೆ.

‘ಅತ್ಯಂತ ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿರುವ ಪೊಲೀಸ್‌ ಅಧಿಕಾರಿಗಳನ್ನು ವಜಾಗೊಳಿಸಬೇಕು. ಕಳಂಕಿತರಿಗೆ ಯಾವುದೇ ಪ್ರಮುಖ ಹುದ್ದೆ ನೀಡಬಾರದು ಎಂದೂ ಅವರು ಹೇಳಿದರು.

ಏತನ್ಮಧ್ಯೆ, ಉದ್ಯಮಿ ಸಾವಿನ ‌ಘಟನೆಯನ್ನು ಸಿಬಿಐ ಅಥವಾ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿದವು.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ಕಾನ್ಪುರಕ್ಕೆ ಧಾವಿಸಿದರು. ಬಿಎಸ್‌ಪಿ ವರಿಷ್ಠೆ ಮಾಯಾವತಿ ಅವರು ಸಿಬಿಐ ತನಿಖೆಗೆ ಆಗ್ರಹಿಸಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT