ಸೋಮವಾರ, ಅಕ್ಟೋಬರ್ 3, 2022
24 °C

ಮುನ್ನೆಚ್ಚರಿಕೆ ಡೋಸ್‌ ಆಗಿ ಕೋರ್ಬೆವ್ಯಾಕ್ಸ್‌ ಬಳಸಲು ಕೇಂದ್ರ ಸರ್ಕಾರ ಅನುಮೋದನೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ‘18 ವರ್ಷ ಮೇಲ್ಪಟ್ಟವರ ಪೈಕಿ ಕೋವಿಶೀಲ್ಡ್‌ ಅಥವಾ ಕೋವ್ಯಾಕ್ಸಿನ್‌ ಲಸಿಕೆಯ ಎರಡು ಡೋಸ್‌ಗಳನ್ನೂ ಪಡೆದುಕೊಂಡಿರುವವರಿಗೆ ಮುನ್ನೆಚ್ಚರಿಕೆ ಡೋಸ್‌ ಆಗಿ ಕೋರ್ಬೆವ್ಯಾಕ್ಸ್‌ ನೀಡುವುದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ’ ಎಂದು ಮೂಲಗಳು ಬುಧವಾರ ತಿಳಿಸಿವೆ.

18 ವರ್ಷ ಮೇಲ್ಪಟ್ಟವರು ಮೇಲ್ಪಟ್ಟವರು ಮುನ್ನೆಚ್ಚರಿಕೆ ಡೋಸ್‌ ಆಗಿ ಕೋರ್ಬೆವ್ಯಾಕ್ಸ್‌ ಬಳಸಬಹುದು ಎಂದು ಕೇಂದ್ರ ಸರ್ಕಾರ ಅನುಮೋದಿಸಿರುವುದಾಗಿ ಅಧಿಕೃತ ಮೂಲಗಳು ಖಚಿತಪಡಿಸಿರುವುದಾಗಿ ಸುದ್ದಿಸಂಸ್ಥೆ ಎಎನ್ಐ ಟ್ವೀಟ್ ಮಾಡಿದೆ. 

ಕೋವಿಡ್‌–19 ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯು (ಎನ್‌ಟಿಎಜಿಐ) ಕೋರ್ಬೆವ್ಯಾಕ್ಸ್‌ ಲಸಿಕೆಯನ್ನು ಮುನ್ನೆಚ್ಚರಿಕೆ ಡೋಸ್‌ ಆಗಿ ನೀಡಲು ಶಿಫಾರಸು ಮಾಡಿತ್ತು. ಇದರ ಆಧಾರದಲ್ಲಿ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ.

ಕೋರ್ಬೆವ್ಯಾಕ್ಸ್‌ ಲಸಿಕೆಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದ್ದು, ಕೋವಿಡ್‌–19 ರೋಗ ನಿರೋಧಕ ಕಾರ್ಯಕ್ರಮದಡಿ ಸದ್ಯ 12 ರಿಂದ 14 ವರ್ಷದ ಮಕ್ಕಳಿಗೆ ಇದನ್ನು ನೀಡಲಾಗುತ್ತಿದೆ. 

‘ಕೋವ್ಯಾಕ್ಸಿನ್‌ ಅಥವಾ ಕೋವಿಶೀಲ್ಡ್‌ ಪಡೆದಿದ್ದವರಿಗೆ ಪ್ರಾಯೋಗಿಕವಾಗಿ ಕೋರ್ಬೆವ್ಯಾಕ್ಸ್‌ ಲಸಿಕೆ ನೀಡಿದ್ದಾಗ ಅವರ ದೇಹದಲ್ಲಿ ಗಮನಾರ್ಹ ಪ್ರಮಾಣದಲ್ಲಿ ಪ್ರತಿಕಾಯಗಳು ವೃದ್ಧಿಯಾಗಿದ್ದನ್ನು ಕೋವಿಡ್‌–19 ಕಾರ್ಯಪಡೆ ಗಮನಿಸಿತ್ತು. ಈ ಲಸಿಕೆಯನ್ನು ಮುನ್ನೆಚ್ಚರಿಕೆ ಡೋಸ್‌ ಆಗಿ ನೀಡಲು ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನಾಲಯ (ಡಿಸಿಜಿಐ) ಜೂನ್‌ 4ರಂದೇ ಒಪ್ಪಿಗೆ ನೀಡಿತ್ತು’ ಎಂದೂ ಮೂಲಗಳು ಮಾಹಿತಿ ನೀಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು