ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 22,431 ಜನರಲ್ಲಿ ಸೋಂಕು ದೃಢ, 318 ಜನರ ಸಾವು

Last Updated 7 ಅಕ್ಟೋಬರ್ 2021, 6:34 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 22,431 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ ಸೋಂಕಿನಿಂದ 318 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಭಾರತದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,38,94,312ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,44,198ಕ್ಕೆ ಕುಸಿದಿದೆ. ಒಟ್ಟಾರೆ ಮೃತಪಟ್ಟವರ ಸಂಖ್ಯೆ 4,49,846ಕ್ಕೆ ಏರಿಕೆಯಾಗಿದೆ.

ಕಳೆದ ಹದಿಮೂರು ದಿನಗಳಿಂದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 30 ಸಾವಿರದೊಳಗಿದೆ. ಒಟ್ಟು ಸೋಂಕಿತರಿಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.72ರಷ್ಟಿದೆ. ಗುಣಮುಖರಾದವರ ಪ್ರಮಾಣ ಶೇ 97.95ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT