ಗುರುವಾರ , ಸೆಪ್ಟೆಂಬರ್ 24, 2020
19 °C

Covid-19 India Update | 24 ದಿನಗಳಲ್ಲಿ ಪ್ರಕರಣ10ಲಕ್ಷದಿಂದ 22ಲಕ್ಷಕ್ಕೆ ಏರಿಕೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

coronavirus

ನವದೆಹಲಿ: ಭಾರತದಲ್ಲಿ 24 ದಿನಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ 10 ಲಕ್ಷದಿಂದ 22 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ ನಾಲ್ಕು ದಿನಗಳಿಂದ 24 ಗಂಟೆಗಳಲ್ಲಿ ದಾಖಲಾಗುತ್ತಿರುವ ಸೋಂಕು ದೃಢಪಟ್ಟ ಪ್ರಕರಣಗಳ ಸಂಖ್ಯೆ 60,000 ದಾಟುತ್ತಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಗುಣಮುಖ ಪ್ರಮಾಣ ಶೇ 69.33ರಷ್ಟಿದೆ ಹಾಗೂ ಸಾವಿನ ಪ್ರಮಾಣ ಶೇ 2ಕ್ಕೆಇಳಿಕೆಯಾಗಿದೆ.

ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಜಾಗತಿಕವಾಗಿ ಭಾರತವು ಅಮೆರಿಕ ಹಾಗೂ ಬ್ರೆಜಿಲ್‌ ನಂತರದ ಸ್ಥಾನದಲ್ಲಿದೆ. ಆದರೆ, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 62,064 ಹೊಸ ಪ್ರಕರಣಗಳು ದಾಖಲಾಗಿದ್ದರೆ; ಅಮೆರಿಕದಲ್ಲಿ 53,893 ಹಾಗೂ ಬ್ರೆಜಿಲ್‌ನಲ್ಲಿ 49,970 ಪ್ರಕರಣಗಳು ವರದಿಯಾಗಿವೆ.

ದೆಹಲಿಯಲ್ಲಿ ಸೋಮವಾರ ಕೋವಿಡ್‌ ದೃಢಪಟ್ಟ 707 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 20 ಮಂದಿ ಸಾವಿಗೀಡಾಗಿದ್ದು, ಈವರೆಗೂ ಒಟ್ಟು 4,131 ಜನ ಮೃತಪಟ್ಟಿದ್ದಾರೆ. ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 1,46,134 ತಲುಪಿದೆ, ಈ ಪೈಕಿ 1,31,657 ಮಂದಿ ಗುಣಮುಖರಾಗಿದ್ದಾರೆ. ಆಗಸ್ಟ್‌ 10ರಂದು ಕೋವಿಡ್‌ ದೃಢಪಟ್ಟ ಪ್ರಕರಣಗಳ ಪ್ರಮಾಣ ಶೇ 5.7ರಷ್ಟಿದೆ ಹಾಗೂ ಗುಣಮುಖರಾದವರ ಪ್ರಮಾಣ ಶೇ 90ರಷ್ಟು ದಾಖಲಾಗಿರುವುದಾಗಿ ದೆಹಲಿ ಸರ್ಕಾರ ಹೇಳಿದೆ.

ಮುಂಬೈನಲ್ಲಿ ಕಳೆದ 24 ಗಂಟೆಗಳಲ್ಲಿ 1,407 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಹಾಗೂ ಕೋವಿಡ್‌ ದೃಢಪಟ್ಟ 925 ಹೊಸ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಗುಣಮುಖ ಪ್ರಮಾಣ ಶೇ 78ರಷ್ಟಿದ್ದು 19,190 ಸಕ್ರಿಯ ಪ್ರಕರಣಗಳಿವೆ.

ಕರ್ನಾಟಕದಲ್ಲಿ 4,267 ಪ್ರಕರಣ, 114 ಜನ ಸಾವು; ಆಂಧ್ರ ಪ್ರದೇಶದಲ್ಲಿ 7,665 ಹೊಸ ಪ್ರಕರಣ, 80 ಜನ ಸಾವು; ಪಂಜಾಬ್‌ನಲ್ಲಿ 988 ಹೊಸ ಪ್ರಕರಣ, 20 ಮಂದಿ ಸಾವು; ಮಧ್ಯ ಪ್ರದೇಶದಲ್ಲಿ 866 ಹೊಸ ಪ್ರಕರಣ, 19 ಮಂದಿ ಸಾವಿಗೀಡಾಗಿದ್ದಾರೆ.

ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 62,064 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. 1,007 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಬೆಳಿಗ್ಗೆ ತಿಳಿಸಿದೆ.

ಇದರೊಂದಿಗೆ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22,15,075ಕ್ಕೆ ಏರಿಕೆಯಾಗಿದೆ. ಈವರೆಗೆ 44,386 ಸಾವು ಸಂಭವಿಸಿದೆ. 15,35,744 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 6,34,945 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಚೇತರಿಕೆಯಾಗುವವರ ಸಂಖ್ಯೆ ಹೆಚ್ಚಾಗಿದೆ. ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಶೇ 80ಕ್ಕಿಂತ ಹೆಚ್ಚು 10 ರಾಜ್ಯಗಳಿಗೆ ಸಂಬಂಧಿಸಿದ್ದಾಗಿದೆ ಎಂದೂ ಸಚಿವಾಲಯ ತಿಳಿಸಿದೆ.

ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದಲ್ಲಿ ಸದ್ಯ 1,45,865 ಸಕ್ರಿಯ ಪ್ರಕರಣಗಳಿವೆ. ತಮಿಳುನಾಡಿನಲ್ಲಿ 53,336, ದೆಹಲಿಯಲ್ಲಿ 10,729 ಸಕ್ರಿಯ ಪ್ರಕರಣಗಳಿವೆ.

ಆಗಸ್ಟ್ 9ರ ವರೆಗೆ 2,45,83,558 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 4,77,023 ಮಾದರಿಗಳನ್ನು ಶನಿವಾರ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು