ಶನಿವಾರ, ಆಗಸ್ಟ್ 20, 2022
21 °C

Covid-19 India Update: ಕೇರಳದಲ್ಲಿ 4,470 ಹೊಸ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: 

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯಂತ 3,824 ಹೊಸ ಪ್ರಕರಣಗಳು ದಾಖಲಾಗಿದ್ದು, 70 ಮಂದಿ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ ಈ ವರೆಗೂ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 18,68,172ಕ್ಕೆ ತಲುಪಿದೆ. 71,910 ಸಕ್ರಿಯ ಪ್ರಕರಣಗಳಿವೆ.

ಒಂದೇ ದಿನದಲ್ಲಿ ದೆಹಲಿಯಾದ್ಯಂತ 1,575 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 61 ಮಂದಿ ಸಾವಿಗೀಡಾಗಿದ್ದಾರೆ.

ಈ ವರೆಗೂ ದೆಹಲಿಯಲ್ಲಿ ಒಟ್ಟು 6,01,150 ಪ್ರಕರಣಗಳು ದಾಖಲಾಗಿವೆ. 5,72,523 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.

ತಮಿಳುನಾಡಿನಲ್ಲಿ ಹೊಸದಾಗಿ 1,220 ಪ್ರಕರಣಗಳು ಪತ್ತೆಯಾಗಿದ್ದು, 17 ಸೋಂಕಿತರು ಮೃತಪಟ್ಟಿದ್ದಾರೆ.

ರಾಜಸ್ಥಾನದಾದ್ಯಂತ 1,592 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು,  15 ಮಂದಿ ಸಾವಿಗೀಡಾಗಿದ್ದಾರೆ.

ಕೇರಳದಲ್ಲಿ ಹೊಸದಾಗಿ 4,470 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 59,517 ಸಕ್ರಿಯ ಪ್ರಕರಣಗಳಿವೆ.     

ದೇಶದಲ್ಲಿ ಕೋವಿಡ್‌–19 ದೃಢಪಟ್ಟ 31,522 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 412 ಮಂದಿ ಸೋಂಕಿನಿಂದ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.

ಗುರುವಾರ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 97,67,372 ತಲುಪಿದ್ದು, ಈ ಪೈಕಿ 92,53,306 ಮಂದಿ ಗುಣಮುಖರಾಗಿದ್ದಾರೆ ಹಾಗೂ 1,41,772 ಮಂದಿ ಸಾವಿಗೀಡಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 37,725 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 3,72,293 ಸಕ್ರಿಯ ಪ್ರಕರಣಗಳಿವೆ.

 

ಐಸಿಎಂಆರ್ ಮಾಹಿತಿ‌ ಪ್ರಕಾರ, ದೇಶದಲ್ಲಿ ಒಟ್ಟು 15,07,59,726 ಗಂಟಲು ದ್ರವ ಮಾದರಿಗಳಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ. ಬುಧವಾರ ಒಂದೇ ದಿನ 9,22,959 ಮಾದರಿಗಳಿಗೆ ಪರೀಕ್ಷೆ ನಡೆಸಿರುವುದಾಗಿ ತಿಳಿಸಿದೆ.

 

ಮಹಾರಾಷ್ಟ್ರದಲ್ಲಿ 74,315 ಸಕ್ರಿಯ ಪ್ರಕರಣಗಳಿವೆ. ಕೇರಳದಲ್ಲಿ 60,066, ಕರ್ನಾಟಕದಲ್ಲಿ 23,075, ದೆಹಲಿಯಲ್ಲಿ 20,546, ಪಶ್ಚಿಮ ಬಂಗಾಳದಲ್ಲಿ 23,650 ಹಾಗೂ ಉತ್ತರ ಪ್ರದೇಶದಲ್ಲಿ 20,658 ಸಕ್ರಿಯ ಪ್ರಕರಣಗಳಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು