Covid-19 India Update: ದೇಶದಲ್ಲಿ 3.78 ಲಕ್ಷ ಸಕ್ರಿಯ ಪ್ರಕರಣಗಳು

ನವದೆಹಲಿ: ದೇಶದಲ್ಲಿ ಕೋವಿಡ್–19 ದೃಢಪಟ್ಟ 32,080 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 402 ಮಂದಿ ಸೋಂಕಿನಿಂದ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.
ಬುಧವಾರ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 97,35,850 ತಲುಪಿದ್ದು, ಈ ಪೈಕಿ 92,15,581 ಮಂದಿ ಗುಣಮುಖರಾಗಿದ್ದಾರೆ ಹಾಗೂ 1,41,360 ಮಂದಿ ಸಾವಿಗೀಡಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 36,635 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 3,78,909 ಸಕ್ರಿಯ ಪ್ರಕರಣಗಳಿವೆ.
ಐಸಿಎಂಆರ್ ಪ್ರಕಾರ, ದೇಶದಲ್ಲಿ ಒಟ್ಟು 14,98,36,767 ಗಂಟಲು ದ್ರವ ಮಾದರಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಮಂಗಳವಾರ ಒಂದೇ ದಿನ 10,22,712 ಮಾದರಿಗಳಿಗೆ ಪರೀಕ್ಷೆ ನಡೆಸಿರುವುದಾಗಿ ತಿಳಿಸಿದೆ.
ಮಹಾರಾಷ್ಟ್ರದಲ್ಲಿ 74,460 ಸಕ್ರಿಯ ಪ್ರಕರಣಗಳಿವೆ. ಕೇರಳದಲ್ಲಿ 59,873, ಕರ್ನಾಟಕದಲ್ಲಿ 25,034, ದೆಹಲಿಯಲ್ಲಿ 22,310 ಹಾಗೂ ಪಶ್ಚಿಮ ಬಂಗಾಳದಲ್ಲಿ 23,750 ಸಕ್ರಿಯ ಪ್ರಕರಣಗಳಿವೆ.
📍Total #COVID19 Cases in India (as on December 09, 2020)
▶️94.66% Cured/Discharged/Migrated (92,15,581)
▶️3.89% Active cases (3,78,909)
▶️1.45% Deaths (1,41,360)Total COVID-19 confirmed cases = Cured/Discharged/Migrated+Active cases+Deaths pic.twitter.com/mC9LCudJ3z
— #IndiaFightsCorona (@COVIDNewsByMIB) December 9, 2020
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.