ಭಾನುವಾರ, ಮಾರ್ಚ್ 7, 2021
32 °C

Covid-19 India Update: 24 ಗಂಟೆಗಳಲ್ಲಿ ಕೋವಿಡ್‌ ದೃಢಪಟ್ಟ 13,823 ಪ್ರಕರಣಗಳು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಕೋವಿಡ್‌ ಲಸಿಕೆ ಪಡೆಯುತ್ತಿರುವ ಆರೋಗ್ಯ ಕಾರ್ಯಕರ್ತರು–ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 13,823 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 16,988 ಮಂದಿ ಗುಣಮುಖರಾಗಿದ್ದು, ಸೋಂಕಿನಿಂದ 162 ಜನ ಸಾವಿಗೀಡಾಗಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ 1,05,95,660 ಮುಟ್ಟಿದ್ದು, ಈ ಪೈಕಿ 1,02,45,741 ಜನ ಗುಣಮುಖರಾಗಿದ್ದಾರೆ ಹಾಗೂ 1,52,718 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 1,97,201 ಪ್ರಕರಣಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪ್ರಕಟಿಸಿದೆ.

ಕೇರಳದಲ್ಲಿ 70,481 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 49,615, ಉತ್ತರ ಪ್ರದೇಶದಲ್ಲಿ 8,172, ಕರ್ನಾಟಕದಲ್ಲಿ 7,884 ಹಾಗೂ ಪಶ್ಚಿಮ ಬಂಗಾಳದಲ್ಲಿ 6,781 ಪ್ರಕರಣಗಳು ಸಕ್ರಿಯವಾಗಿವೆ.

ದೇಶದಲ್ಲಿ ಈವರೆಗೂ 6,74,835 ಜನರಿಗೆ ಕೋವಿಡ್‌ ಲಸಿಕೆ ಹಾಕಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು