ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 24 ಗಂಟೆಗಳಲ್ಲಿ 49,881 ಪ್ರಕರಣಗಳು

Last Updated 29 ಅಕ್ಟೋಬರ್ 2020, 4:56 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 50,000ಕ್ಕಿಂತಲೂ ಕಡಿಮೆ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 80 ಲಕ್ಷ ದಾಟಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಿಂದ ತಿಳಿದು ಬಂದಿದೆ.

ಗುರುವಾರ ಬೆಳಿಗ್ಗೆ 8ರ ವರೆಗೂ ಕೋವಿಡ್‌–19 ದೃಢಪಟ್ಟ 49,881 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 80,40,203 ತಲುಪಿದ್ದು, ಒಟ್ಟು ಪ್ರಕರಣಗಳ ಪೈಕಿ 73,15,989 ಜನ ಚೇತರಿಸಿಕೊಂಡಿದ್ದಾರೆ.

ಸೋಂಕಿನಿಂದ ಈವರೆಗೂ 1,20,527 ಮಂದಿ ಸಾವಿಗೀಡಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 517 ಜನ ಕೋವಿಡ್‌ನಿಂದ ಮೃತಪಟ್ಟಿದ್ದಾರೆ, ಇದೇ ಅವಧಿಯಲ್ಲಿ 56,480 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲೀಗ 6,03,687 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 1,30,286 ಮಂದಿ, ಕೇರಳದಲ್ಲಿ 93,369, ಕರ್ನಾಟಕದಲ್ಲಿ 68,180 ಹಾಗೂ ದೆಹಲಿಯಲ್ಲಿ 29,378 ಸಕ್ರಿಯ ಪ್ರಕರಣಗಳಿವೆ.

ಅಕ್ಟೋಬರ್‌ 28ರ ವರೆಗೂ ದೇಶದಲ್ಲಿ ಒಟ್ಟು 10,65,63,440 ಗಂಟಲು ದ್ರವ ಮಾದರಿಗಳಿಗೆ ಕೋವಿಡ್‌–19 ಪರೀಕ್ಷೆ ನಡೆಸಲಾಗಿದೆ ಹಾಗೂ ಬುಧವಾರ ಒಂದೇ ದಿನ 10,75,760 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್‌ ತಿಳಿಸಿದೆ.

ದೇಶದಲ್ಲಿ ಸೆಪ್ಟೆಂಬರ್‌ 16ರಂದು ಕೋವಿಡ್‌–19 ದೃಢಪಟ್ಟ ಪ್ರಕರಣಗಳ ಸಂಖ್ಯೆ 50 ಲಕ್ಷ ದಾಟಿತು. ಸೆಪ್ಟೆಂಬರ್‌ 28ರಂದು 60 ಲಕ್ಷ ಹಾಗೂ ಅಕ್ಟೋಬರ್‌ 11ರಂದು ಪ್ರಕರಣಗಳ ಸಂಖ್ಯೆ 70 ಲಕ್ಷ ಹಾಗೂ ಅಕ್ಟೋಬರ್‌ 28ಕ್ಕೆ ಪ್ರಕರಣಗಳ ಸಂಖ್ಯೆ 80 ಲಕ್ಷ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT