ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ 1,68,358 ಪ್ರಕರಣಗಳು ಸಕ್ರಿಯ

Last Updated 2 ಮಾರ್ಚ್ 2021, 7:55 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 12,286 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,11,24,527 ತಲುಪಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಿಂದ ತಿಳಿದು ಬಂದಿದೆ.

ಇದೇ ಅವಧಿಯಲ್ಲಿ ಸೋಂಕಿನಿಂದ 91 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೂ ಒಟ್ಟು 1,57,248 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ 30 ಜನ, ಪಂಜಾಬ್‌ನಲ್ಲಿ 18 ಹಾಗೂ ಕೇರಳದಲ್ಲಿ 13 ಮಂದಿ ಮೃತಪಟ್ಟಿದ್ದಾರೆ.

ಪ್ರಸ್ತುತ ಒಟ್ಟು ಪ್ರಕರಣಗಳ ಪೈಕಿ ಶೇ 1.51ರಷ್ಟು, 1,68,358 ಪ್ರಕರಣಗಳು ಸಕ್ರಿಯವಾಗಿವೆ. ಈವರೆಗೂ 1,07,98,921 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖ ಪ್ರಮಾಣ ಶೇ 97.07ರಷ್ಟಾಗಿದೆ. ಸಾವಿನ ಪ್ರಮಾಣ ಶೇ 1.41ಕ್ಕೆ ಇಳಿಕೆಯಾಗಿದೆ.

ಕಳೆದ ವರ್ಷ ಆಗಸ್ಟ್‌ 7ರಂದು ಭಾರತದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ 20 ಲಕ್ಷ ದಾಟಿತ್ತು. ಸೆಪ್ಟೆಂಬರ್‌ 16ರಂದು 50 ಲಕ್ಷ ಹಾಗೂ ಡಿಸೆಂಬರ್‌ 19ಕ್ಕೆ ಒಂದು ಕೋಟಿ ಪ್ರಕರಣಗಳು ದಾಖಲಾದವು.

ಐಸಿಎಂಆರ್‌ ಪ್ರಕಾರ, ಮಾರ್ಚ್‌ 1ರ ವರೆಗೂ ದೇಶದಾದ್ಯಂತ 21,76,18,057 ಗಂಟಲು ದ್ರವ ಮಾದರಿಗಳಿಗೆ ಕೊರೊನಾ ವೈರಸ್‌ ಸೋಂಕು ಪರೀಕ್ಷೆ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT