ಬುಧವಾರ, ಅಕ್ಟೋಬರ್ 21, 2020
26 °C

Covid-19 India Update: ಒಟ್ಟು ಪ್ರಕರಣಗಳ ಸಂಖ್ಯೆ 69 ಲಕ್ಷದ ಸಮೀಪ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಕೊರೊನಾ ವಾರಿಯರ್ಸ್‌ಗೆ ಚಿತ್ರಗಳ ಮೂಲಕ ನಮನ

ನವದೆಹಲಿ: ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್‌ ದೃಢಪಟ್ಟ ಪ್ರಕರಣಗಳ ಸಂಖ್ಯೆ ಇಳಿಮುಖರಾಗಿದ್ದರೆ, ಕರ್ನಾಟಕದಲ್ಲಿ 10 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿವೆ.

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,395 ಹೊಸ ಪ್ರಕರಣಗಳು ದಾಖಲಾಗಿದ್ದರೆ, ಇದೇ ಅವಧಿಯಲ್ಲಿ 15,575 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ 358 ಮಂದಿ ಮೃತಪಟ್ಟಿದ್ದಾರೆ.

ಕೇರಳದಲ್ಲಿ 5,445 ಹೊಸ ಪ್ರಕರಣಗಳು, ತಮಿಳುನಾಡಿನಲ್ಲಿ 5088 ಹಾಗೂ ದೆಹಲಿಯಲ್ಲಿ 2,726 ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ 10,704 ಹೊಸ ಪ್ರಕರಣಗಳು ದಾಖಲಾಗಿವೆ.

ದೇಶದಲ್ಲಿ ಇದುವರೆಗೆ 58 ಲಕ್ಷ ಕೋವಿಡ್‌ ಸೋಂಕಿತರು ಗುಣಮುಖರಾಗಿದ್ದಾರೆ.

ಗುರುವಾರ ಬೆಳಗ್ಗಿನ ವರೆಗೂ ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 78,524 ಹೊಸ ಪ್ರಕರಣಗಳು ದೃಢಪಟ್ಟಿದ್ದು, 971 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದುವರೆಗೆ ಸೋಂಕಿತರ ಸಂಖ್ಯೆ 68,35,656ಕ್ಕೆ ಏರಿಕೆಯಾಗಿದ್ದು, ಆ ಪೈಕಿ 1,05,526 ಮಂದಿ ಮೃತಪಟ್ಟಿದ್ದಾರೆ. ಗುಣಮುಖರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈವರೆಗೆ 58,27,705 ಮಂದಿ ಚೇತರಿಸಿಕೊಂಡಿದ್ದಾರೆ.

ಇದನ್ನೂ ಓದಿ... ನಿಯಂತ್ರಣಕ್ಕೆ ಬಾರದ ಕೋವಿಡ್: ಮೈಮರೆವು ಸರಿಯಲ್ಲ, ಎಚ್ಚರ ಬೇಕು

ಅಕ್ಟೋಬರ್ 8ರ ವರೆಗೆ ಒಟ್ಟು 8,34,65,975 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 11,94,321 ಮಾದರಿಗಳನ್ನು ಮಂಗಳವಾರ ಪರೀಕ್ಷಿಸಲಾಯಿತು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಮಾಹಿತಿ ನೀಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು