ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ಮಹಾರಾಷ್ಟ್ರದಲ್ಲಿ ಒಟ್ಟು ಪ್ರಕರಣಗಳು 10 ಲಕ್ಷದ ಸಮೀಪ

Last Updated 10 ಸೆಪ್ಟೆಂಬರ್ 2020, 16:48 IST
ಅಕ್ಷರ ಗಾತ್ರ

ನವದಹಲಿ: ಮಹಾರಾಷ್ಟ್ರದಲ್ಲಿ ಮತ್ತೆ ಕೋವಿಡ್‌ ದೃಢಪಟ್ಟ ಪ್ರಕರಣಗಳ ಸಂಖ್ಯೆ ಏರಿಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 23,446 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 448 ಮಂದಿ ಸಾವಿಗೀಡಾಗಿದ್ದಾರೆ. ಆರೋಗ್ಯ ಇಲಾಖೆಯ ಪ್ರಕಾರ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 9,90,795 ದಾಖಲಾಗಿದೆ.

ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌ ದೃಢಪಟ್ಟ 4,308 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 58,340 ಮಂದಿ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ. ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 2,05,482 ಮುಟ್ಟಿದ್ದು, ಸೋಂಕಿನಿಂದ 4,666 ಮಂದಿ ಸಾವಿಗೀಡಾಗಿದ್ದಾರೆ. ನಗರದಲ್ಲಿ ಐಸಿಯು ಬೆಡ್‌ಗಳ ಸಂಖ್ಯೆ ಹೆಚ್ಚಿಸುವಂತೆ ದೆಹಲಿ ಸರ್ಕಾರ ಇಲಾಖೆಗೆಗಳಿಗೆ ಸೂಚಿಸಿದೆ.

ಉತ್ತರ ಪ್ರದೇಶದಲ್ಲೂ ಒಂದೇ ದಿನ ದಾಖಲಾಗಿರುವ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. 7,042 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 2,92,029 ಆಗಿದೆ.

ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 95,735 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 1,172 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 44,65,864ಕ್ಕೆ ಏರಿಕೆಯಾಗಿದೆ. ಈವರೆಗೆ75,062 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 34,71,784 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 9,19,018 ಸಕ್ರಿಯ ಪ್ರಕರಣಗಳು ಇವೆ.

ದೇಶದಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಇಲ್ಲಿ 9.44 ಲಕ್ಷ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 27, 407 ಮಂದಿ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದಲ್ಲಿ 5.17 ಲಕ್ಷ ಮಂದಿಗೆ ಸೋಂಕು ತಗುಲಿದ್ದು, ಇದುವರೆಗೆ 4,560 ಮಂದಿಗೆ ಸಾವಿಗೀಡಾಗಿದ್ದಾರೆ. ಇತ್ತ ತಮಿಳುನಾಡಿನಲ್ಲಿ 4.75 ಲಕ್ಷ ಜನರಿಗೆ ಸೋಂಕು ದೃಢಪಟ್ಟಿದ್ದು, 8,012 ಮಂದಿ ಕೊನೆಯುಸಿರೆಳೆದಿದ್ದಾರೆ.

ಇತ್ತ ಕರ್ನಾಟಕದಲ್ಲಿ 9,540 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 4,21,730ಕ್ಕೆ ಏರಿಕೆಯಾಗಿದ್ದು, 6,808 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT