ಸೋಮವಾರ, ಆಗಸ್ಟ್ 8, 2022
23 °C

Covid-19 India Update: 46 ಲಕ್ಷ ದಾಟಿದ ಸೋಂಕಿತರು, 36 ಲಕ್ಷ ಮಂದಿ ಗುಣಮುಖ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಇಲ್ಲಿಯವರೆಗೆ ಒಟ್ಟು 46,99,559 ಕೋವಿಡ್–19 ಸೋಂಕು ಪ್ರಕರಣಗಳು ವರದಿಯಾಗಿವೆ.  36,24,196 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ. 77.65ಕ್ಕೆ ಏರಿಕೆಯಾಗಿದೆ.

ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ 3,161 ಪ್ರಕರಣಗಳು ವರದಿಯಾಗಿದ್ದು, 59 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು ಪ್ರಕರಣಗಳ ಸಂಖ್ಯೆ 1,99,493ಕ್ಕೆ ಏರಿದೆ. ಇದರಲ್ಲಿ 1,72,085 ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನೂ 23,521 ಪ್ರಕರಣಗಳು ಸಕ್ರಿಯವಾಗಿವೆ. 3,887 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮಹಾರಾಷ್ಟ್ರದಲ್ಲಿ ಇಂದು ಹೊಸದಾಗಿ 22,084 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 10,37,765 ಪ್ರಕರಣಗಳು ಖಚಿತವಾಗಿದೆ. ಇಂದು 391 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಇಂದು ಒಂದೇ ದಿನ  9,140 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು 9,557 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 4,40,411ಕ್ಕೆ ಏರಿಕೆಯಾಗಿದೆ. ಒಟ್ಟಾರೆ 7,161 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಉತ್ತರಾಖಂಡ್‌ನಲ್ಲಿ 1,115, ದೆಹಲಿಯಲ್ಲಿ 4,321, ಪಂಜಾಬ್‌ನಲ್ಲಿ 2,441 ಪ್ರಕರಣಗಳು ವರದಿಯಾಗಿದೆ.

ರೋಗಿಗಳಿಗೆ ಹಾಸಿಗೆ ಇಲ್ಲ ಎನ್ನುವಂತಿಲ್ಲ
ಕೋವಿಡ್‌–19 ಚಿಕಿತ್ಸೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳು ವೈರಲ್‌ ಜ್ವರದಿಂದ ಬಳಲುತ್ತಿರುವವರಿಗೆ ಹಾಸಿಗೆ ಇಲ್ಲ ಎನ್ನುವಂತಿಲ್ಲ ಮತ್ತು ಚಿಕಿತ್ಸೆ ನೀಡಬೇಕು. ಜೊತೆಗೆ ಅವರಿಗೆ ಚಿಕಿತ್ಸೆ ಲಭ್ಯವಾಗುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.

‘ಕೋವಿಡ್‌ಗೆ ಮದ್ದು ಕಂಡುಹಿಡಿಯುವ ತನಕ, ಸೋಂಕಿನ ಕುರಿತು ನಿರ್ಲಕ್ಷ್ಯ ತೋರಿಸಬೇಡಿ’ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು