ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ಕೊರೊನಾದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳ

Last Updated 19 ಸೆಪ್ಟೆಂಬರ್ 2020, 15:40 IST
ಅಕ್ಷರ ಗಾತ್ರ

ನವದೆಹಲಿ: ಶನಿವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 93,337 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 1,247 ಮಂದಿ ಮೃತಪಟ್ಟಿದ್ದಾರೆ.

ಶನಿವಾರ ಸಂಜೆ ವೇಳೆಗೆ ವಿವಿಧ ರಾಜ್ಯಗಳ ಆರೋಗ್ಯ ಸಚಿವಾಲಯಗಳು ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ ಗುಣಮುಖರಾಗುತ್ತಿರುವವರ ಪ್ರಮಾಣವೂ ಹೆಚ್ಚಾಗಿದೆ.

ಪಶ್ಚಿಮ ಬಂಗಾಳದಲ್ಲಿ ಶನಿವಾರ 3,188 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ದೃಡಪಟ್ಟಿದ್ದು, 56 ಸಾವು ಸಂಭವಿಸಿದೆ. ರಾಜ್ಯದಲ್ಲಿ ಈವರೆಗೆ 2,21,960 ಮಂದಿಗೆ ಸೋಂಕು ತಗುಲಿದ್ದು, 1,93,014 ಜನ ಗುಣಮುಖರಾಗಿದ್ದಾರೆ. 4,298 ಸಾವು ಸಂಭವಿಸಿದೆ. ಸದ್ಯ 24,648 ಸಕ್ರಿಯ ಪ್ರಕರಣಗಳಿವೆ.

ರಾಜಸ್ಥಾನದಲ್ಲಿ 1,834 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 14 ಸಾವು ಸಂಭವಿಸಿದೆ. ಈವರೆಗೆ 1,13,124 ಜನರು ಸೋಂಕಿತರಾಗಿದ್ದು, ಈ ಪೈಕಿ 1,322 ಮಂದಿ ಮೃತಪಟ್ಟಿದ್ದಾರೆ. 93,805 ಸೋಂಕಿತರು ಚೇತರಿಸಿಕೊಂಡಿದ್ದಾರೆ. 17,997 ಸಕ್ರಿಯ ಪ್ರಕರಣಗಳಿವೆ.

ಉತ್ತರಾಖಂಡದಲ್ಲಿ 2,078, ಮಣಿಪುರದಲ್ಲಿ 117, ಮಧ್ಯಪ್ರದೇಶದಲ್ಲಿ 2,607, ಆಂಧ್ರಪ್ರದೇಶದಲ್ಲಿ 8,218, ಜಮ್ಮು–ಕಾಶ್ಮೀರದಲ್ಲಿ 1,492 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಕರ್ನಾಟಕದಲ್ಲಿ8,364 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 114 ಮಂದಿ ಮೃತಪಟ್ಟಿದ್ದಾರೆ. ಒಂದೇ ದಿನ10,815 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 6.24 ಕೋಟಿ ಕೋವಿಡ್ ಟೆಸ್ಟ್‌: ದೇಶದಲ್ಲಿ ಸೋಂಕು ಮೊದಲು ಕಾಣಿಸಿಕೊಂಡಾಗಿನಿಂದ ಈದುವರೆಗೆ ಒಟ್ಟು 6,24,54,254 ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಶುಕ್ರವಾರ ಒಂದೇ ದಿನ ಒಟ್ಟು 8,81,911 ಜನರನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋದನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT