ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ಶೇ 96.34ರಷ್ಟು ಸೋಂಕಿತರು ಗುಣಮುಖ

Last Updated 25 ಜನವರಿ 2021, 5:45 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 13,203 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 131 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 1,06,67,736 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,53,470 ಮಂದಿ ಸಾವಿಗೀಡಾಗಿದ್ದಾರೆ.

1,03,30,084 ಸೋಂಕಿತರು ಗುಣಮುಖರಾಗಿದ್ದು, 1,84,182 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 13,298 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಕೋವಿಡ್‌ನಿಂದ ಚೇತರಿಸಿಕೊಂಡವರ ಪ್ರಮಾಣ ಶೇ.96.83ಕ್ಕೆ ತಲುಪಿದ್ದು, ಶೇ. 1.73 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 1.44 ಇದೆ.

ಈ ವರೆಗೆ 16,15,504 ಮಂದಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT