ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪ್ರಕರಣ ಹೆಚ್ಚಳ: ಪ್ರಧಾನಿ ಮೋದಿಯಿಂದ ಉನ್ನತ ಮಟ್ಟದ ಸಭೆ

Last Updated 4 ಏಪ್ರಿಲ್ 2021, 6:28 IST
ಅಕ್ಷರ ಗಾತ್ರ

ನವದೆಹಲಿ: ಭಾರತದಾದ್ಯಂತ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಕೋವಿಡ್‌ ಸಂಬಂಧಿತ ಸಮಸ್ಯೆಗಳು ಮತ್ತು ಲಸಿಕೆ ಅಭಿಯಾನದ ಬಗ್ಗೆ ಉನ್ನತ ಅಧಿಕಾರಿಗಳಿಂದ ಪ್ರಧಾನಿ ಮೋದಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.

ಕೋವಿಡ್‌ ತಡೆಯುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಮೋದಿ ಅವಲೋಕನ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಸಭೆಯಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿ, ಮೋದಿಯವರ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿಗಳು ಸೇರಿದಂತೆ ಎಲ್ಲಾ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 93,249 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 513 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT