ಮಂಗಳವಾರ, ಮಾರ್ಚ್ 28, 2023
32 °C

Covid-19 India Update: ದೇಶದಾದ್ಯಂತ 40 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿನ ಕೊರೊನಾ ಸೋಂಕಿತರ ಸಂಖ್ಯೆ 40 ಲಕ್ಷ ದಾಟಿದೆ. ಆ ಮೂಲಕ 40 ಲಕ್ಷಕ್ಕೂ ಅಧಿಕ ಸೋಂಕಿತರನ್ನು ಹೊಂದಿರುವ ಭಾರತ ಜಗತ್ತಿನ ಮೂರನೇ ರಾಷ್ಟ್ರವಾಗಿದೆ. 

ಅಮೆರಿಕ ಮೊದಲ ಸ್ಥಾನದಲ್ಲಿದ್ದು 63,92,303 ಪ್ರಕರಣಗಳು ದಾಖಲಾಗಿವೆ. ಬ್ರೆಜಿಲ್‌ನಲ್ಲಿ 40,91,801 ಪ್ರಕರಣಗಳು ಬೆಳಕಿಗೆ ಬರುವ ಮೂಲಕ ಎರಡನೇ ಸ್ಥಾನದಲ್ಲಿದೆ. 

ಭಾರತದಲ್ಲಿನ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 40,23,179ಕ್ಕೆ ಏರಿದೆ. ಅದರಲ್ಲಿ 31,07,223 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 8,46,395 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 69,561ಕ್ಕೆ ತಲುಪಿದೆ. 

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಐದು ರಾಜ್ಯಗಳಲ್ಲಿ ಶೇ. 62 ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಮಹಾರಾಷ್ಟ್ರದಲ್ಲಿ 2,11,325, ಆಂಧ್ರಪ್ರದೇಶದಲ್ಲಿ 1,02,067, ಕರ್ನಾಟಕದಲ್ಲಿ 99,120, ತಮಿಳುನಾಡಿನಲ್ಲಿ 51,633 ಮತ್ತು ಉತ್ತರ ಪ್ರದೇಶದಲ್ಲಿ 58,595 ಸಕ್ರಿಯ ಪ್ರಕರಣಗಳಿವೆ. 
    
ಕರ್ನಾಟಕದಲ್ಲಿ ಶನಿವಾರ ಒಂದೇ ದಿನ 9,102 ಮಂದಿ ಸೋಂಕಿತರ ಗುಣಮುಖರಾಗಿದ್ದಾರೆ. ಈವರೆಗೆ 2,83,298 ಮಂದಿ ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 9,746 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 128 ಮಂದಿ ಮೃತಪಟ್ಟಿದ್ದಾರೆ. ‌ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,89,232ಕ್ಕೆ ಏರಿಕೆಯಾಗಿದ್ದು, ಇದುವರೆಗೆ 6,298 ಮಂದಿ ಸಾವಿಗೀಡಾಗಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು