Covid-19 India Update: ಲಸಿಕೆಯ ಭರವಸೆ, ಹೊಸ ಪ್ರಕರಣಗಳು ಇಳಿಕೆ

ನವದೆಹಲಿ: ಹೊಸ ವರ್ಷಕ್ಕೆ ಕೋವಿಡ್ ಲಸಿಕೆಯ ಭರವಸೆಯ ಪರಿಣಾಮ ದೇಶದಲ್ಲಿ ಕೋವೀಡ್ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ.
ಈಗಾಗಲೇ ಭಾರತ ಸರ್ಕಾರ ಕೋವಿಶೀಲ್ಡ್ ತುರ್ತು ಬಳಕೆಗೆ ಅನುಮತಿ ನೀಡಿದೆ. ಮತ್ತೊಂದು ಲಸಿಕೆ ಕೋವಾಕ್ಸಿನ್ ಕೂಡ ಒಂದೆರಡು ದಿನಗಳಲ್ಲಿ ಬಳಕೆಗೆ ಲಭ್ಯವಾಗಲಿದೆ ಎನ್ನಲಾಗಿದೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 19,078 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 224 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.
ಈ ವರೆಗೆ ಭಾರತದಲ್ಲಿ ಒಟ್ಟು 1,03,05,788 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 99,06,387 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇಲ್ಲಿಯವರೆಗೂ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,49,218ಕ್ಕೆ ತಲುಪಿದೆ. ಶುಕ್ರವಾರ ಒಂದೇ ದಿನಕ್ಕೆ 22,926 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಕೇರಳ, ಮಹಾರಾಷ್ಟ್ರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಛತ್ತೀಸ್ಗಡ ರಾಜ್ಯಗಳಲ್ಲಿ ಶೇ.62 ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
India reports 19,078 new COVID-19 cases, 22,926 recoveries, and 224 deaths in last 24 hours, as per Union Health Ministry
Total cases: 1,03,05,788
Active cases: 2,50,183
Total recoveries: 99,06,387
Death toll: 1,49,218 pic.twitter.com/lynsRgzAkn
— ANI (@ANI) January 2, 2021
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.