ನವದೆಹಲಿ: ದೇಶದಾದ್ಯಂತ ಕೋವಿಡ್‌ನಿಂದ ಚೇತರಿಸಿಕೊಂಡವರ ಪ್ರಮಾಣವು ಶೇ 83.33ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮಾರ್ಚ್ 25ರಂದು ವಿಧಿಸಲಾದ ಮೊದಲ ಲಾಕ್‌ಡೌನ್ ನಂತರ ಭಾರತದಲ್ಲಿ ಕೋವಿಡ್‌ನಿಂದ ಗುಣಮುಖರಾದವರ ಪ್ರಮಾಣ ಸ್ಥಿರ ಸುಧಾರಣೆ ಕಂಡಿದೆ ಎಂದು ಕೇಂದ್ರ ತಿಳಿಸಿದೆ.

ದೇಶದಲ್ಲಿ ದಾಖಲಾಗಿರುವ ಒಟ್ಟು ಕೋವಿಡ್ ಪ್ರಕರಣಗಳ ಪೈಕಿ ಶೇ 85ರಷ್ಟು ಪ್ರಕರಣಗಳು ಹತ್ತು ರಾಜ್ಯಗಳಲ್ಲಿ ಕೇಂದ್ರಿಕೃತವಾಗಿವೆ. ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ದೆಹಲಿ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶಗಳಲ್ಲಿ ಹೆಚ್ಚಿನ ಪ್ರಕರಣಗಳು ಬೆಳಕಿಗೆ ಬಂದಿವೆ.

ಈ ವರೆಗೂ ದೇಶದಾದ್ಯಂತ ಒಟ್ಟು 7,41,96,729 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿವೆ ಎಂದು ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ.

ಮಹಾರಾಷ್ಟ್ರ ಹಾಗೂ ತಮಿಳುನಾಡಿನಲ್ಲಿ ಅಕ್ಟೋಬರ್ 31ರ ವರೆಗೂ ಲಾಕ್‌ಡೌನ್ ಅನ್ನು ವಿಧಿಸಲಾಗಿವೆ.

ಅಕ್ಟೋಬರ್ 1ರಿಂದ ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್‌ಗಳು ತಮ್ಮ ಆಸನ ಸಾಮರ್ಥ್ಯದ ಶೇ 50ರ ವರೆಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿಸಲಾಗುವುದು. ಇದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು (ಎಸ್‌ಒಪಿ) ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ದೇಶದ ಒಟ್ಟು 62,25,764 ಪ್ರಕರಣಗಳ ಪೈಕಿ 9,40,441 ಸಕ್ರಿಯ ಪ್ರಕರಣಗಳಿದ್ದು, 51,87,826 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ 97,497 ಮಂದಿ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.