ಶನಿವಾರ, ಆಗಸ್ಟ್ 20, 2022
22 °C

Covid-19 India Update: ಒಂದೇ ದಿನದಲ್ಲಿ 68,584 ಕೊರೊನಾ ಸೋಂಕಿತರು ಚೇತರಿಕೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 68,584 ಕೊರೊನಾ ಸೋಂಕಿತರು ಚೇತರಿಕೆ ಕಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 

ದೇಶದಲ್ಲಿ 8,15,538 ಕೋವಿಡ್‌ ಪ್ರಕರಣಗಳು ಸಕ್ರಿಯವಾಗಿದ್ದು, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ ಒಟ್ಟು 29,70,492ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳಿಗಿಂತ ಚೇತರಿಸಿಕೊಂಡವರ ಸಂಖ್ಯೆ 3.5 ಪಟ್ಟು ಅಧಿಕವಾಗಿದೆ. 

ಈವರೆಗೆ 67,376 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.         

ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಶೇ.62 ಪ್ರಕರಣಗಳು ತಮಿಳುನಾಡು, ಉತ್ತರ ಪ್ರದೇಶ, ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿವೆ. ಈ ಐದು ರಾಜ್ಯಗಳಲ್ಲಿ ಕೋವಿಡ್‌ನಿಂದಾಗಿ ಮೃತಪಟ್ಟವರ ಸಂಖ್ಯೆ ದೇಶದ ಶೇ. 70ರಷ್ಟಿದೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ.

ಮಹಾರಾಷ್ಟ್ರದಲ್ಲಿ 2,02,048, ಆಂಧ್ರಪ್ರದೇಶದಲ್ಲಿ 1,03,076, ಕರ್ನಾಟಕದಲ್ಲಿ 94,478, ತಮಿಳುನಾಡಿನಲ್ಲಿ 52,380, ಉತ್ತರ ಪ್ರದೇಶದಲ್ಲಿ 56,459 ಪ್ರಕರಣಗಳು ಸಕ್ರಿಯವಾಗಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು