ಶುಕ್ರವಾರ, ಅಕ್ಟೋಬರ್ 30, 2020
27 °C

Covid-19 India Update: ಮಹಾರಾಷ್ಟ್ರದಲ್ಲಿ 16,476 ಹೊಸ ಪ್ರಕರಣ, 394 ಸಾವು

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಪತ್ತೆಯಾದ ಹೊಸ ಕೋವಿಡ್‌ ಪ್ರಕರಣಗಳ ಪೈಕಿ ಶೇ 76 ಪ್ರಕರಣಗಳು ಹತ್ತು ರಾಜ್ಯಗಳಲ್ಲಿ ಬೆಳಕಿಗೆ ಬಂದಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಕಳೆದ 24 ಗಂಟೆಗಳಲ್ಲಿ ಹೊಸದಾಗಿ ಮೃತಪಟ್ಟವರ ಒಟ್ಟು ಸಂಖ್ಯೆಗಳ ಪೈಕಿ ಶೇ 82ರಷ್ಟು ಹತ್ತು ರಾಜ್ಯಗಳಿಂದ ವರದಿಯಾಗಿದೆ. 

ಮಹಾರಾಷ್ಟ್ರದಲ್ಲಿ ಗುರುವಾರ 394 ಮಂದಿ ಕೋವಿಡ್‌ ಸೋಂಕಿನಿಂದ ಮೃತಪಟ್ಟಿದ್ದು, 16,476 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. 

ಕರ್ನಾಟಕದಲ್ಲಿ ಹೊಸದಾಗಿ 10,070 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 130 ಮಂದಿ ಮೃತಪಟ್ಟಿದ್ದಾರೆ. 

ತಮಿಳುನಾಡಿನಲ್ಲಿ 5,688 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 66 ಮಂದಿ ಸಾವಿಗೀಡಾಗಿದ್ದಾರೆ. 

ಪಂಜಾಬ್‌ನಲ್ಲಿ 1,317 ಪ್ರಕರಣಗಳು ಪತ್ತೆಯಾಗಿದ್ದು, 45 ಜನರು ಪ್ರಾಣ ಕಳೆದುಕೊಂಡಿದ್ದಾರೆ. 

ದೇಶದಾದ್ಯಂತ ಒಟ್ಟು 63,12,585 ಪ್ರಕರಣಗಳ ಪೈಕಿ 9,40,705 ಸಕ್ರಿಯ ಪ್ರಕರಣಗಳಿದ್ದು, 52,73,202 ಮಂದಿ ಗುಣಮುಖರಾಗಿದ್ದಾರೆ.

ಇದನ್ನೂ ಓದಿ | ಕೋವಿಡ್‌: ಸೆಪ್ಟೆಂಬರ್‌ನಲ್ಲೇ 26.21 ಲಕ್ಷ ಪ್ರಕರಣ ಪತ್ತೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು