ಮಂಗಳವಾರ, ಸೆಪ್ಟೆಂಬರ್ 29, 2020
21 °C

ಕೋವಿಡ್‌ | ಪಶ್ಚಿಮ ಬಂಗಾಳ ಸಂಪೂರ್ಣ ಲಾಕ್‌ಡೌನ್‌: ವಿಮಾನ, ರೈಲು, ಸಾರಿಗೆ ಸ್ಥಗಿತ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಕೋಲ್ಕತ: ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳವನ್ನು ಶನಿವಾರ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗಿದೆ . 

ರಾಜ್ಯದ ಎಲ್ಲಾ ಸಾರ್ವಜನಿಕ ಸಾರಿಗೆ, ಕಚೇರಿಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. 

ಅಗತ್ಯ ಸೇವೆಯಲ್ಲಿ ತೊಡಗಿದವರನ್ನು ಹೊರತುಪಡಿಸಿ, ಬೇರೆಯವರು ಮನೆಯಿಂದ ಹೊರಬರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.  

ಕೊರೊನಾ ಸೋಂಕಿನ ಸರಪಳಿಯನ್ನು ಮುರಿಯಲು ಜುಲೈ 23 ರಿಂದ ಪಶ್ಚಿಮ ಬಂಗಾಳದಲ್ಲಿ ವಾರಕ್ಕೆ ಎರಡು ದಿನ ಲಾಕ್‌ಡೌನ್‌ ಹೇರಲಾಗಿದೆ. 

ಕೋಲ್ಕತ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಮತ್ತು ಅಲ್ಲಿಂದ ತೆರಳುವ ವಿಮಾನಗಳ ಕಾರ್ಯಾಚರಣೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ. ಲಾಕ್‌ಡೌನ್ ಕಾರಣ ದೂರ ಪ್ರಯಾಣದ ರೈಲುಗಳನ್ನು ಸಹ ಮರು ನಿಗದಿಪಡಿಸಲಾಗಿದೆ.

ಔಷಧಿ ಅಂಗಡಿಗಳು ಮತ್ತು ಆರೋಗ್ಯ ಸಂಸ್ಥೆಗಳಂತಹ ಅಗತ್ಯ ಸೇವೆಗಳನ್ನು ತೆರೆಯಲಾಗಿದೆ. ಲಾಕ್‌ಡೌನ್ ದಿನಗಳಲ್ಲಿ ಪೆಟ್ರೋಲ್ ಪಂಪ್‌ಗಳನ್ನು ಸಹ ತೆರೆಯಲು ಅನುಮತಿ ನೀಡಲಾಗಿದೆ. 

ರಾಷ್ಟ್ರವ್ಯಾಪಿ ಲಾಕ್‌ಡೌನ್‌ನ ಮೊದಲ ಹಂತ ಪ್ರಾರಂಭವಾದ ಮಾರ್ಚ್ ತಿಂಗಳ ಅಂತ್ಯದಿಂದ ಶಾಲಾ-ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಪಶ್ಚಿಮ ಬಂಗಾಳದಲ್ಲಿ ಮುಚ್ಚಲ್ಪಟ್ಟಿವೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು