ಶನಿವಾರ, ಅಕ್ಟೋಬರ್ 31, 2020
26 °C
ಕೋವಿಡ್: ಒಂದೇ ದಿನದಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖ

ಹೊಸ ಪ್ರಕರಣ ಮೀರಿಸಿದ ಗುಣಮುಖರ ಪ್ರಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇಶದಲ್ಲಿ ಕೋವಿಡ್‌ನಿಂದ ಒಂದೇ ದಿನ 1 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಗುಣಮುಖರಾದವರ ಒಟ್ಟು ಸಂಖ್ಯೆ 45 ಲಕ್ಷ ದಾಟಿದೆ. ಗುಣಮುಖ ಪ್ರಮಾಣ ಶೇ 80.86ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

ಗುಣಮುಖರಾಗಿ ಮನೆಗೆ ಮರಳುತ್ತಿರುವವರ ಸಂಖ್ಯೆಯಲ್ಲಿ ಸತತ ನಾಲ್ಕು ದಿನಗಳಿಂದ ಭಾರಿ ಹೆಚ್ಚಳವಾಗಿದೆ. ಈ ಮೂಲಕ ಜಗತ್ತಿನಲ್ಲಿ ಅತಿಹೆಚ್ಚು ಗುಣಮುಖ ಪ್ರಮಾಣ ದಾಖಲಿಸುತ್ತಿರುವ ದೇಶಗಳ ಸಾಲಿನಲ್ಲಿ ಭಾರತ ಮುಂಚೂಣಿಯಲ್ಲಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು