ಗುರುವಾರ , ಮಾರ್ಚ್ 23, 2023
30 °C

Covid India Report: 104 ಕೋವಿಡ್ ಹೊಸ ಪ್ರಕರಣಗಳು

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 104 ಕೋವಿಡ್ –19ರ ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಇದೇ ವೇಳೆ ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದಾರೆ. ಅದರಲ್ಲಿ ಕೇರಳದಲ್ಲಿ 2, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಮೃತರಾಗಿದ್ದಾರೆ. ಇದರೊಂದಿಗೆ ಕೋವಿಡ್ –19 ಸಕ್ರಿಯ ಪ್ರಕರಣಗಳು ಸಂಖ್ಯೆ 2,149ಕ್ಕೆ ಇಳಿಕೆಯಾಗಿದೆ.

ದೈನಂದಿನ ಕೋವಿಡ್–19ರ ಪಾಸಿಟಿವಿಟಿ ದರವು ಶೇ.0.11 ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರವು ಶೇಕಡಾ 0.12 ರಷ್ಟಿದೆ. ಒಟ್ವಾರೆ ಈವರೆಗೆ ದೇಶದಲ್ಲಿ 4.46 ಕೋಟಿಗೆ (4,46,81,040) ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೂ 5,30,726 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಸಕ್ರಿಯ ಕೋವಿಡ್–19 ಸೋಂಕು ಪ್ರಕರಣಗಳು ಒಟ್ಟು ಶೇ.0.01ರಷ್ಟಿದೆ. ಆದರೆ, ಚೇತರಿಕೆ ದರವು ಶೇ.98.80ಕ್ಕೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು