ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ 56 ಲಕ್ಷ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ

Last Updated 23 ಸೆಪ್ಟೆಂಬರ್ 2020, 5:13 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 83,347 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. 1,085 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ, ದೇಶದಾದ್ಯಂತ ಈವರೆಗೆ 56,46,011 ಮಂದಿಗೆ ಸೋಂಕು ತಗುಲಿದ್ದು, 90,020 ಮಂದಿ ಅಸುನೀಗಿದ್ದಾರೆ. 45,87,614 ಮಂದಿ ಗುಣಮುಖರಾಗಿದ್ದಾರೆ. ಸದ್ಯ 9,68,377 ಸಕ್ರಿಯ ಪ್ರಕರಣಗಳಿವೆ.

ಈವರೆಗೆ ಅತಿಹೆಚ್ಚು ಸೋಂಕು ತಗುಲಿದ ಜನರಿರುವ ರಾಜ್ಯಗಳ ಪೈಕಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಸದ್ಯ 93 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.

ಆಂಧ್ರಪ್ರದೇಶದಲ್ಲಿ 71,465 ಸಕ್ರಿಯ ಪ್ರಕರಣಗಳಿವೆ. 5,62,376 ಮಂದಿ ಗುಣಮುಖರಾಗಿದ್ದಾರೆ. 5,461 ಮಂದಿ ಈವರೆಗೆ ಮತಪಟ್ಟಿದ್ದಾರೆ.

ಈ ಮಧ್ಯೆ, ಸೆಪ್ಟೆಂಬರ್ 22ರ ವರೆಗೆ 6.62 ಕೋಟಿಗೂ ಹೆಚ್ಚು ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಮಂಗಳವಾರ 9,53,683 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT