ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 24 ಗಂಟೆಗಳಲ್ಲಿ 4,092 ಮಂದಿ ಸಾವು

Last Updated 9 ಮೇ 2021, 4:39 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ಭಾನುವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್–19 ದೃಢಪಟ್ಟ 4,03,738 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 4,092 ಮಂದಿ ಮೃತಪಟ್ಟಿದ್ದಾರೆ. ಸತತ ನಾಲ್ಕನೇ ದಿನವೂ ದಾಖಲಾಗುತ್ತಿರುವ ಹೊಸ ಪ್ರಕರಣಗಳ ಸಂಖ್ಯೆ 4 ಲಕ್ಷ ದಾಟಿದೆ.

ಪ್ರಸ್ತುತ ದೇಶದಲ್ಲಿ 37,36,648 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 2,22,96,414ಕ್ಕೆ ಏರಿಕೆಯಾಗಿದ್ದು, ಈವರೆಗೂ 2,42,362 ಮಂದಿ ಸಾವಿಗೀಡಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ನಿಂದ ತಿಳಿದು ಬಂದಿದೆ.

ಕಳೆದ 24 ಗಂಟೆಗಳಲ್ಲಿ 3.86 ಲಕ್ಷಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಈವರೆಗೂ ಸೋಂಕಿನಿಂದ ಒಟ್ಟು 1,83,17,404 ಮಂದಿ ಗುಣಮುಖರಾಗಿದ್ದಾರೆ. ದೇಶದಾದ್ಯಂತ 16,94,39,663 ಡೋಸ್‌ಗಳಷ್ಟು ಲಸಿಕೆ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT