ಶುಕ್ರವಾರ, ಅಕ್ಟೋಬರ್ 30, 2020
27 °C

Covid-19 India Update: ಮಹಾರಾಷ್ಟ್ರದಲ್ಲಿ ಒಂದೇ ದಿನ 18,056 ಕೊರೊನಾ ಪ್ರಕರಣ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Coronavirus

ನವದೆಹಲಿ: ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಪ್ರಸರಣ ಮುಂದುವರಿದಿದೆ.

ಭಾನುವಾರ ಒಂದೇ ದಿನ ಮಹಾರಾಷ್ಟ್ರದಲ್ಲಿ 18,056 ಮಂದಿಗೆ ಸೋಂಕು ತಗುಲಿದ್ದು, 380 ಮಂದಿ ಅಸುನೀಗಿದ್ದಾರೆ. ಇದರೊಂದಿಗೆ ರಾಜ್ಯದ ಸೋಂಕಿತರ ಸಂಖ್ಯೆ 13,39,232 ತಲುಪಿದೆ. ಈವರೆಗೆ 35,571 ಸಾವು ಸಂಭವಿಸಿದೆ. 2,73,228 ಸಕ್ರಿಯ ಪ್ರಕರಣಗಳಿವೆ.

ಮುಂಬೈ ನಗರವೊಂದರಲ್ಲೇ 2,261 ಪ್ರಕರಣ, 44 ಸಾವು ವರದಿಯಾಗಿದೆ. ಅಲ್ಲಿ ಸದ್ಯ 26,593 ಸಕ್ರಿಯ ಪ್ರಕರಣಗಳಿವೆ.

ಪಶ್ಚಿಮ ಬಂಗಾಳದಲ್ಲಿ 3,185 ಮಂದಿಗೆ ಸೋಂಕು ತಗುಲಿದ್ದು, 60 ಮಂದಿ ಅಸುನೀಗಿದ್ದಾರೆ. 2,946 ಮಂದಿ ಗುಣಮುಖರಾಗಿದ್ದಾರೆ ಎಂದು ಅಲ್ಲಿನ ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ: 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 3,292 ಪ್ರಕರಣ ದೃಢಪಟ್ಟಿದ್ದು, 42 ಮಂದಿ ಮೃತಪಟ್ಟಿದ್ದಾರೆ. 3,739 ಸೋಂಕಿತರು ಇಂದು ಗುಣಮುಖರಾಗಿದ್ದಾರೆ.

ತಮಿಳುನಾಡಿನಲ್ಲಿ 5,791 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದ್ದು, 80 ಮಂದಿ ಸಾವಿಗೀಡಾಗಿದ್ದಾರೆ. 5,706 ಮಂದಿ ಚೇತರಿಸಿಕೊಂಡಿದ್ದಾರೆ.

ಉಳಿದಂತೆ ಉತ್ತರ ಪ್ರದೇಶದಲ್ಲಿ 4,403, ಆಂಧ್ರಪ್ರದೇಶದಲ್ಲಿ 6,923, ಕರ್ನಾಟಕದಲ್ಲಿ  9,543, ಜಮ್ಮು–ಕಾಶ್ಮೀರದಲ್ಲಿ 1,141, ಪಂಜಾಬ್‌ನಲ್ಲಿ 1,458, ಹರಿಯಾಣದಲ್ಲಿ 1,515 ಪ್ರಕರಣಗಳು ದೃಢಪಟ್ಟಿವೆ.

ಇದನ್ನೂ ಓದಿ: 

ಭಾನುವಾರ ಬೆಳಿಗ್ಗೆ ವೇಳೆಗೆ ಕೊನೆಗೊಂಡ 24 ಗಂಟೆಗಳಲ್ಲಿ ದೇಶದಾದ್ಯಂತ 88,600 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದರೊಂದಿಗೆ ಸೋಂಕಿತರ ಸಂಖ್ಯೆ 60 ಲಕ್ಷ ಸನಿಹ ತಲುಪಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು