ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | ಮಹಾರಾಷ್ಟ್ರದಲ್ಲಿ ಒಂದೇ ದಿನ 13,165 ಪ್ರಕರಣ

Last Updated 19 ಆಗಸ್ಟ್ 2020, 17:13 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿದ್ದು, ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ.

ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 13,165 ಹೊಸ ಪ್ರಕರಣಗಳು ದೃಢಪಟ್ಟಿದ್ದು, 346 ಮಂದಿ ಮೃತಪಟ್ಟಿದ್ದಾರೆ. 9,011 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 1,60,413 ಸಕ್ರಿಯ ಪ್ರಕರಣಗಳಿವೆ.

ದೇಶದ ವಾಣಿಜ್ಯ ನಗರಿ ಮುಂಬೈಯಲ್ಲಿ ಒಂದೇ ದಿನ 1,132 ಹೊಸ ಪ್ರಕರಣಗಳು ದೃಢಪಟ್ಟಿದ್ದು, 864 ಜನ ಚೇತರಿಸಿಕೊಂಡಿದ್ದಾರೆ. 46 ಸಾವು ಸಂಭವಿಸಿದೆ. ಮುಂಬೈಯಲ್ಲಿ ಈವರೆಗೆ 1,06,057 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಪಂಜಾಬ್‌ನಲ್ಲಿ 1,693 ಹೊಸ ಪ್ರಕರಣಗಳು ಪತ್ತೆಯಾಗಿದೆ. 941 ಮಂದಿ ಗುಣಮುಖರಾಗಿದ್ದು, 24 ಮಂದಿ ಸಾವಿಗೀಡಾಗಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 3,169, ಉತ್ತರ ಪ್ರದೇಶದಲ್ಲಿ 5,156, ರಾಜಸ್ಥಾನದಲ್ಲಿ 1,312 ಹೊಸ ಪ್ರಕರಣಗಳು ಪತ್ತೆಯಾಗಿವೆ.

ತಮಿಳುನಾಡಿನಲ್ಲಿ 5,795 ಪ್ರಕರಣಗಳು ಹಾಗೂ 116 ಸಾವು ವರದಿಯಾಗಿದೆ. ಸದ್ಯ 53,155 ಸಕ್ರಿಯ ಪ್ರಕರಣಗಳಿವೆ.

ಮನೆಯಲ್ಲೇ ಓಣಂ ಆಚರಿಸಲು ಕೇರಳ ಸಿಎಂ ಮನವಿ: ಕೊರೊನಾ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮನೆಯಲ್ಲಿಯೆ ಓಣಂ ಹಬ್ಬ ಆಚರಿಸುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ಜತೆಗೆ, ರಾಜ್ಯದ ಗಡಿ ಪ್ರದೇಶಗಳಲ್ಲಿ ಕಣ್ಗಾವಲಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT