ಗುರುವಾರ , ಅಕ್ಟೋಬರ್ 1, 2020
26 °C

Covid-19 India Update | ದೇಶದಲ್ಲಿ ಶೇ. 69.80 ಸೋಂಕಿತರು ಗುಣಮುಖ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Covid-19

ನವದೆಹಲಿ: ದೇಶದಾದ್ಯಂತ ಕೋವಿಡ್‌–19 ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಶೇ. 69.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಇದುವರೆಗೆ ಒಟ್ಟು 22.61 ಲಕ್ಷ ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 15.74 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ. 45,202 ಮಂದಿ ಮೃತಪಟ್ಟಿದ್ದು, ಇನ್ನೂ 6.42 ಲಕ್ಷ ಪ್ರಕರಣಗಳು ಸಕ್ರಿಯವಾಗಿವೆ.

ಸಾವಿನ ಪ್ರಮಾಣ ಶೇ. 1.99ಕ್ಕೆ ಇಳಿಮುಖವಾಗಿದೆ. ಗುಣಮುಖರ ಪ್ರಮಾಣ ಶೇ. 69.80ಕ್ಕೆ ಏರಿಕೆಯಾಗಿದ್ದು, ಶೇ. 28.21ರಷ್ಟು ಪ್ರಕರಣಗಳು ಮಾತ್ರವೇ ಸಕ್ರಿಯವಾಗಿವೆ.

ಕೊರೊನಾ ಸಾವಿನ ಪ್ರಮಾಣ ಶೇ. 2ಕ್ಕಿಂತಲೂ ಕಡಿಮೆಯಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ್‌ ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ ಅತಿಹೆಚ್ಚು ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದಲ್ಲಿ ಒಟ್ಟು 5.24 ಲಕ್ಷ ಪ್ರಕರಣಗಳು ದೃಢಪಟ್ಟಿವೆ. 18,050 ಸೋಂಕಿತರು ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 3.02 ಲಕ್ಷ, ಆಂಧ್ರ ಪ್ರದೇಶದಲ್ಲಿ 2.35 ಲಕ್ಷ ಪ್ರಕರಣಗಳು ಖಚಿತವಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು