ಸೋಮವಾರ, ಆಗಸ್ಟ್ 8, 2022
21 °C

Covid-19 India Update: ಹೊಸ ಪ್ರಕರಣಗಳಲ್ಲಿ ಇಳಿಕೆ, 3 ಲಕ್ಷ ಸಕ್ರಿಯ ಪ್ರಕರಣ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

Covid-19

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 22,890 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿವೆ. 338 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ, ದೇಶದಲ್ಲಿ ಈವರೆಗೆ ಸೋಂಕಿತರಾದವರ ಸಂಖ್ಯೆ 99,79,447 ತಲುಪಿದೆ. ಒಟ್ಟು 1,44,789 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,13,831ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ: 

ಒಂದೇ ದಿನ 31,087 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಒಟ್ಟು 95,20,827 ಮಂದಿ ಗುಣಮುಖರಾಗಿದ್ದಾರೆ.

ಈವರೆಗೆ 15.89 ಕೋಟಿ ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಗುರುವಾರ ಒಂದೇ ದಿನ 11,13,406 ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ಇದನ್ನೂ ಓದಿ: 

ಆದರೆ, ಪರೀಕ್ಷೆ ವೇಳೆ ಪತ್ತೆಯಾಗಿರುವುದಕ್ಕಿಂತಲೂ ಹೆಚ್ಚು ಪ್ರಕರಣಗಳು ಭಾರತದಲ್ಲಿ ಇವೆ ಎಂದು ಗುರುವಾರ ವರದಿಯಾಗಿತ್ತು. ಕರ್ನಾಟಕದಲ್ಲಿ ಒಂದು ಪ್ರಕರಣ ಪತ್ತೆಯಾದರೆ 90 ಪ್ರಕರಣಗಳು ಅಗೋಚರವಾಗಿಯೇ ಉಳಿದಿವೆ. ದೇಶದಲ್ಲಿ ಶೇ 60ರಷ್ಟು ಜನರು ಈ ಸೋಂಕಿಗೆ ತೆರೆದುಕೊಂಡಿದ್ದಾರೆ. ಆದರೆ ತಪಾಸಣೆ ವೇಳೆ ಪತ್ತೆಯಾಗದೇ ಇರುವ ಕಾರಣದಿಂದಲೇ ಭಾರತದಲ್ಲಿ ಕೋವಿಡ್‌ ಎರಡನೇ ಅಲೆ ಕಾಣಿಸಿಕೊಂಡಿಲ್ಲ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು