ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Update: ಸಕ್ರಿಯ ಪ್ರಕರಣಗಳ ಸಂಖ್ಯೆ 4,597ಕ್ಕೆ ಇಳಿಕೆ

Last Updated 3 ಡಿಸೆಂಬರ್ 2022, 4:43 IST
ಅಕ್ಷರ ಗಾತ್ರ

ನವದೆಹಲಿ:ದೇಶದಲ್ಲಿ ಕೋವಿಡ್–19 ದೃಢಪಟ್ಟ 253 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.

ಸಚಿವಾಲಯ ಇಂದು ಬೆಳಗ್ಗೆ 8ಕ್ಕೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ,ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ (75) ಇಳಿಕೆ ಕಂಡುಬಂದಿದೆ. ಸದ್ಯ 4,597 ಪ್ರಕರಣಗಳು ದೇಶದಲ್ಲಿ ಸಕ್ರಿಯವಾಗಿವೆ. ಈ ಪ್ರಮಾಣ ಶುಕ್ರವಾರ 4,672 ಆಗಿತ್ತು.

ದೇಶದಲ್ಲಿ ಇದುವರೆಗೆ ಪತ್ತೆಯಾಗಿರುವ ಪ್ರಕರಣಗಳ ಸಂಖ್ಯೆ 4,46,73,166ಕ್ಕೆ ತಲುಪಿದೆ. ಈ ಪೈಕಿ ಈವರೆಗೆ 4,41,37,942 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಶುಕ್ರವಾರ ಮೃತಪಟ್ಟಿರುವ ಮೂವರೂ ಸೇರಿ ಸಾವಿನ ಸಂಖ್ಯೆ, 5,30,627ಕ್ಕೆ ಏರಿಕೆಯಾಗಿದೆ.

ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.01 ರಷ್ಟಿದೆ. ಗುಣಮುಖರಾದವರ ಪ್ರಮಾಣ ಶೇ 98.80 ರಷ್ಟು ಇದೆ ಎಂದು ಸಚಿವಾಲಯ ಹೇಳಿದೆ.

ಇಲಾಖೆಯ ಮಾಹಿತಿ ಪ್ರಕಾರ ಇದುವರೆಗೆ219.93 ಕೋಟಿ ಡೋಸ್‌ ಕೋವಿಡ್ ಲಸಿಕೆ ವಿತರಿಸಲಾಗಿದೆ.

ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ 2020ರ ಆಗಸ್ಟ್‌ 7 ರಂದು 20 ಲಕ್ಷದ ಗಡಿ ದಾಟಿತ್ತು. ಅದೇ ವರ್ಷದ ಆಗಸ್ಟ್‌ 23ರಂದು 30 ಲಕ್ಷ, ಸೆಪ್ಟೆಂಬರ್‌ 5ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16ರಂದು 50 ಲಕ್ಷ ಪ್ರಕರಣಗಳು ವರದಿಯಾಗಿದ್ದವು. ನಂತರ ಸೆಪ್ಟೆಂಬರ್‌ 28, ಅಕ್ಟೋಬರ್‌ 11, ಅಕ್ಟೋಬರ್‌ 29 ಹಾಗೂ ನವೆಂಬರ್‌ 20ರಂದು ಕ್ರಮವಾಗಿ 60 ಲಕ್ಷ, 70 ಲಕ್ಷ, 80 ಲಕ್ಷ ಹಾಗೂ 90 ಲಕ್ಷ ಪ್ರಕರಣಗಳು ದಾಖಲಾಗಿದ್ದವು.

ಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ2020ರ ಡಿಸೆಂಬರ್‌ 19ರಂದು ಒಂದು ಕೋಟಿ, 2021ರ ಮೇ 4 ರಂದು ಎರಡು ಕೋಟಿ ಹಾಗೂ ಜೂನ್‌ 23ರಂದು ಮೂರು ಕೋಟಿಗಡಿ ದಾಟಿತ್ತು. ಈ ಸಂಖ್ಯೆಇದೇ ವರ್ಷ (2022) ಜನವರಿ 25ರಂದು ನಾಲ್ಕು ಕೋಟಿಗಿಂತ ಹೆಚ್ಚಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT