ಗುರುವಾರ , ಮೇ 13, 2021
25 °C

ಕೋವಿಡ್‌ ಸೋಂಕು: ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿ ಸಾವು

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಕೊರೊನಾ‌ ಸೋಂಕು ಇರುವುದು ದೃಢಪಟ್ಟ ನಂತರ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಶ್ಚಿಮ ಬಂಗಾಳದ ಸಂಶೇರ್‌ಗಂಜ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರೆಜೌಲ್‌ ಹಕ್ ಗುರುವಾರ ಮುಂಜಾನೆ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ರೆಜೌಲ್‌ ಹಕ್‌ ಕಣಕ್ಕಿಳಿದಿದ್ದರು. ಕೆಲವು ದಿನಗಳ ಹಿಂದೆ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿತ್ತು.

ಬುಧವಾರ ಅವರು ಜಂಗಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ಸ್ಥಿತಿ ಗಂಭೀರವಾದ ನಂತರ ರೆಜೌಲ್ ಅವರನ್ನು ಕೋಲ್ಕತ್ತದ ಆಸ್ಪತ್ರೆಗೆ ದಾಖಲಿಸಲಾಯಿತು.

ಚಿಕಿತ್ಸೆಗೆ ಸ್ಪಂದಿಸದೇ, ಗುರುವಾರ ಮುಂಜಾನೆ 5 ಗಂಟೆ ವೇಳೆಗೆ ನಿಧನರಾದರು ಎಂದು ಮೂಲಗಳು ತಿಳಿಸಿವೆ. ಸಂಶೇರ್‌ಗಂಜ್‌ನಲ್ಲಿ ಏಪ್ರಿಲ್ 26ಕ್ಕೆ ಚುನಾವಣೆ ನಿಗದಿಯಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು