ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 77,266 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ದಿನವೊಂದರಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ. 1,057 ಮಂದಿ ಮೃತಟ್ಟಿದ್ದಾರೆ. ಇದರೊಂದಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 33,87,501 ಲಕ್ಷ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

25,83,948 ಮಂದಿ ಈವರೆಗೆ ಕೊರೊನಾದಿಂದ ಗುಣಮುಖರಾಗಿದ್ದು, 61,529 ಜನ ಸಾವಿಗೀಡಾಗಿದ್ದಾರೆ. ಸದ್ಯ 7,42,023 ಪ್ರಕರಣಗಳಿವೆ ಎಂದು ಸಚಿವಾಲಯ ತಿಳಿಸಿದೆ.

ಕಳೆದ 5 ತಿಂಗಳುಗಳಲ್ಲಿ 3/4ರಷ್ಟು ಸೋಂಕಿತರು ಚೇತರಿಸಿಕೊಂಡಿದ್ದು, 1/4ರಷ್ಟು ಮಾತ್ರ ಸಾವು ಸಂಭವಿಸಿದೆ. ಕೇಂದ್ರ ಸರ್ಕಾರದ ಕಾರ್ಯತಂತ್ರವಾದ ಟೆಸ್ಟ್–ಟ್ರ್ಯಾಕ್–ಟ್ರೀಟ್ (ಪರೀಕ್ಷೆ, ಸಂಪರ್ಕ ಪತ್ತೆ, ಚಿಕಿತ್ಸೆ) ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವುದು ಸಾವಿನ ಸಂಖ್ಯೆ ಕಡಿಮೆ ಮಾಡಿದೆ. ಗುಣಮುಖರಾಗುವವರ ಸಂಖ್ಯೆಯನ್ನು ಹೆಚ್ಚಿಸಿದೆ ಎಂದು ಸಚಿವಾಲಯ ಹೇಳಿದೆ.

ಆಗಸ್ಟ್ 27ರ ವರೆಗೆ ದೇಶದಲ್ಲಿ 3.94 ಕೋಟಿಗೂ ಹೆಚ್ಚು ಕೋವಿಡ್–19 ಪರೀಕ್ಷೆ ನಡೆಸಲಾಗಿದೆ. ಗುರುವಾರ ಒಂದೇ ದಿನ 9 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

Covid-19 world update: 2.43 ಕೋಟಿ ಸೋಂಕಿತರು, ಅಮೆರಿಕದಲ್ಲಿ ಅಧಿಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.