ಶನಿವಾರ, ಡಿಸೆಂಬರ್ 4, 2021
20 °C

Covid-19 India Update: ಮಹಾರಾಷ್ಟ್ರದಲ್ಲಿ 23,350 ಹೊಸ ಪ್ರಕರಣ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Coronavirus testing

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಕೋವಿಡ್‌ ದೃಢಪಟ್ಟ 23,350 ಹೊಸ ಪ್ರಕರಣಗಳು ದಾಖಲಾಗಿದ್ದು, 328 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 2,35,857 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನಿಂದ 6,44,400 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ 26,604 ಮಂದಿ ಮೃತಪಟ್ಟಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಭಾನುವಾರ ಕೋವಿಡ್‌ನಿಂದ 3,207 ಮಂದಿ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ 85.19ಕ್ಕೆ ಏರಿಕೆಯಾಗಿದೆ. ಪ್ರಸ್ತುತ 23,218 ಸಕ್ರಿಯ ಪ್ರಕರಣಗಳಿವೆ.

ಹರಿಯಾಣದಲ್ಲಿ ಒಂದೇ ದಿನ ಅತಿ ಹೆಚ್ಚು 2,277 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 76,549 ತಲುಪಿದೆ. ದೆಹಲಿಯಲ್ಲಿ ಕೋವಿಡ್‌ ದೃಢಪಟ್ಟ 3,256 ಹೊಸ ಪ್ರಕರಣಗಳಿವೆ.

ಬಿಹಾರದಲ್ಲಿ ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಶೇ 88.24 ತಲುಪಿದೆ. ಕಳೆದ 24 ಗಂಟೆಗಳಲ್ಲಿ 1,797 ಹೊಸ ಪ್ರಕರಣಗಳು ದಾಖಲಾಗಿವೆ.

ದೇಶದಲ್ಲಿ 24 ಗಂಟೆ ಅವಧಿಯಲ್ಲಿ 90,633 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, 1,065 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ, ಒಟ್ಟು ಸೋಂಕಿತರ ಸಂಖ್ಯೆ 40 ಲಕ್ಷ ದಾಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ದೇಶದಾದ್ಯಂತ ಈವರೆಗೆ 41,13,812 ಜನರಿಗೆ ಸೋಂಕು ತಗುಲಿದೆ. ಈ ಪೈಕಿ, 31,80,866 ಮಂದಿ ಗುಣಮುಖರಾಗಿದ್ದು, 70,626 ಜನ ಮೃತಪಟ್ಟಿದ್ದಾರೆ. ಸದ್ಯ 8,62,320 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲೇ ಅತಿಹೆಚ್ಚು ಪ್ರಕರಣಗಳು ಪತ್ತೆಯಾಗಿರುವ ಮಹಾರಾಷ್ಟ್ರದಲ್ಲಿ ಸದ್ಯ 2,21,012 ಸಕ್ರಿಯ ಪ್ರಕರಣಗಳಿವೆ. ಆಂಧ್ರ ಪ್ರದೇಶದಲ್ಲಿ 1,00,880 ಸೋಂಕಿತರಿದ್ದಾರೆ.

ಸೆಪ್ಟೆಂಬರ್ 5ರಂದು 10,92,654 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ. ಈವರೆಗೆ ಒಟ್ಟು 4.88 ಕೋಟಿ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಕೋವಿಡ್‌ನಿಂದ ಸಂಭವಿಸುತ್ತಿರುವ ಸಾವಿನ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಸದ್ಯ ಶೇ.1.73ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಈಗಾಗಲೇ ತಿಳಿಸಿದೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು