ಮಂಗಳವಾರ, ಮಾರ್ಚ್ 28, 2023
23 °C

Covid-19 India Update: 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 20,131 ಪ್ರಕರಣಗಳು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Coronavirus

ನವದೆಹಲಿ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 20,131 ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ಸೋಂಕಿನಿಂದ 13,234 ಮಂದಿ ಗುಣಮುಖರಾಗಿದ್ದು,  2,43,446 ಸಕ್ರಿಯ ಪ್ರಕರಣಗಳಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9,43,772 ತಲುಪಿದ್ದು, ಈವರೆಗೂ 27,407 ಮಂದಿ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಮುಖ್ಯಸ್ಥೆ ರೇಖಾ ಶರ್ಮಾ ಅವರಿಗೆ ಕೋವಿಡ್‌–19 ದೃಢಪಟ್ಟಿದೆ. ಅವರು ಮನೆಯಲ್ಲಿಯೇ ಪ್ರತ್ಯೇಕವಾಗಿರಲು ನಿರ್ಧರಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶ ಚಂಡೀಗಢದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಅತಿ ಹೆಚ್ಚು 377 ಕೋವಿಡ್‌ ದೃಢಪಟ್ಟ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 6,372 ತಲುಪಿದೆ ಹಾಗೂ ಸೋಂಕಿನಿಂದ 75 ಮಂದಿ ಸಾವಿಗೀಡಾಗಿದ್ದಾರೆ.

ಬೆಳಗ್ಗಿನವರೆಗೂ ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 75,809 ಹೊಸ ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. ಸೋಂಕಿನಿಂದಾಗಿ 1,133 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಮಧ್ಯ ಪ್ರದೇಶದಲ್ಲಿ ಮಂಗಳವಾರ ಕೋವಿಡ್‌ ದೃಢಪಟ್ಟ 1,864 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 77,323 ತಲುಪಿದೆ. ದೆಹಲಿಯಲ್ಲಿ 3,609 ಹೊಸ ಪ್ರಕರಣಗಳೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1.97 ಲಕ್ಷ ಮುಟ್ಟಿದೆ. ಸೋಂಕಿನಿಂದ ಈವರೆಗೂ 4,618 ಮಂದಿ ಸಾವಿಗೀಡಾಗಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,691 ಮಂದಿ ಗುಣಮುಖರಾಗಿದ್ದು, 10,601 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು 5,17,094 ಪ್ರಕರಣಗಳು ದಾಖಲಾಗಿವೆ.

ಇದರೊಂದಿಗೆ ದೇಶದಲ್ಲಿ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 42,80,423 ತಲುಪಿದ್ದು, 72,775 ಸಾವು ಸಂಭವಿಸಿದೆ. 33,23,951 ಮಂದಿ ಗುಣಮುಖರಾಗಿದ್ದಾರೆ. ಸದ್ಯ 8,83,697 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲೇ ಅತಿಹೆಚ್ಚು ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದಲ್ಲಿ ಸೋಮವಾರ ಒಂದೇ ದಿನ 16,429 ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಈವರೆಗೆ 9,23,641 ಮಂದಿಗೆ ಸೋಂಕು ತಗುಲಿದೆ. 6,59,322 ಜನ ಗುಣಮುಖರಾಗಿದ್ದಾರೆ. 27,027 ಜನ ಅಸು ನೀಗಿದ್ದು, ಸದ್ಯ 2,36,934 ಸಕ್ರಿಯ ಪ್ರಕರಣಗಳಿವೆ.

ದೆಹಲಿಯಲ್ಲಿ 2,077 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,93,526 ತಲುಪಿದೆ.

ಸೆಪ್ಟೆಂಬರ್‌ 7ರ ವರೆಗೆ ದೇಶದಾದ್ಯಂತ 5 ಕೋಟಿಗೂ ಹೆಚ್ಚು ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಸೋಮವಾರ 10,98,621 ಮಾದರಿಗಳ ಪರೀಕ್ಷೆ ನಡೆಸಲಾಗಿತ್ತು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು