Covid-19 India Update: ಮಹಾರಾಷ್ಟ್ರದಲ್ಲಿ ಹೆಚ್ಚಾಯ್ತು ಕೊರೊನಾ ವೈರಸ್ ಸೋಂಕು

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 9,121 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 81 ಮಂದಿ ಸಾವಿಗೀಡಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಿಂದ ತಿಳಿದು ಬಂದಿದೆ.
ಒಟ್ಟು 1,09,25,710 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 1,06,33,025 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೂ 1,55,813 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ ದೇಶದ ವಿವಿಧ ಭಾಗಗಳಲ್ಲಿ 1,36,872 ಮಂದಿ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶದಲ್ಲಿ ಮಂಗಳವಾರದ ವರೆಗೂ 87,20,822 ಮಂದಿ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ.
📍 Increasing gap between #COVID19 Recovered & Active cases of India (June 01, 2020 to February 16, 2021)👇#StaySafe #IndiaWillWin #Unite2FightCorona pic.twitter.com/wNnuo7Sbxr
— #IndiaFightsCorona (@COVIDNewsByMIB) February 16, 2021
ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ 285 ಹೊಸ ಪ್ರಕರಣಗಳು ವರದಿಯಾಗಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಅಲ್ಲಿ ಒಟ್ಟು 2,58,030 ಪ್ರಕರಣಗಳು ದಾಖಲಾಗಿವೆ. ಸೋಮವಾರ ಮಹಾರಾಷ್ಟ್ರದಲ್ಲಿ 3 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಸರ್ಕಾರ ಮತ್ತೊಮ್ಮೆ ಲಾಕ್‌ಡೌನ್ ಜಾರಿ ಮಾಡುವ ಬಗ್ಗೆ ಯೋಚಿಸುತ್ತಿರುವುದಾಗಿ ಹೇಳಿದೆ.
ಪ್ರಸ್ತುತ ಮಹಾರಾಷ್ಟ್ರದಲ್ಲಿ 37,383 ಪ್ರಕರಣಗಳು ಸಕ್ರಿಯವಾಗಿವೆ. ಕೇರಳದಲ್ಲಿ 61,550 ಹಾಗೂ ಕರ್ನಾಟಕದಲ್ಲಿ 5,791, ತಮಿಳುನಾಡಿನಲ್ಲಿ 4,232, ಪಶ್ಚಿಮ ಬಂಗಾಳದಲ್ಲಿ 3,960 ಪ್ರಕರಣಗಳು ಸಕ್ರಿಯವಾಗಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.