ಶನಿವಾರ, ಜನವರಿ 28, 2023
13 °C

Delhi MCD Polls: ಎಎಪಿಗೆ ಸ್ಪಷ್ಟ ಬಹುಮತ, ಮತದಾರರಿಗೆ ಕೇಜ್ರಿವಾಲ್ ಧನ್ಯವಾದ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಯ ಮತ ಎಣಿಕೆ ಮುಕ್ತಾಯವಾಗಿದ್ದು, ಆಮ್ ಆದ್ಮಿ ಪಕ್ಷವು (ಎಎಪಿ) ಸ್ಪಷ್ಟ ಬಹುಮತ ಪಡೆದಿದೆ. 

ಇದರೊಂದಿಗೆ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯವಾಗಲಿದ್ದು, ಎಎಪಿ ಮಹಾನಗರ ಪಾಲಿಕೆ ಚುಕ್ಕಾಣಿ ಹಿಡಿಯಲಿದೆ.

ಚುನಾವಣೆಯಲ್ಲಿ ಎಎಪಿ 134 ಸ್ಥಾನಗಳನ್ನು ಗೆದ್ದಿದೆ, ಬಿಜೆಪಿ 104 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಕಾಂಗ್ರೆಸ್ 9 ಸ್ಥಾನಗಳನ್ನು ಗಳಿಸಿದರೆ, ಸ್ವತಂತ್ರ ಅಭ್ಯರ್ಥಿಗಳು 3ರಲ್ಲಿ ಗೆಲುವು ಸಾಧಿಸಿದ್ದಾರೆ. 

ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್‌ಗಳಿಗೆ ಡಿಸೆಂಬರ್ 4, ಭಾನುವಾರದಂದು ಮತದಾನ ನಡೆದಿತ್ತು.

‘ಪಾಲಿಕೆ ಚುನಾವಣೆಯಲ್ಲಿ ಜನರು ಬದಲಾವಣೆ ಬಯಸಿ, ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ ದೆಹಲಿ ಜನತೆಗೆ ದೆಹಲಿ ಧನ್ಯವಾದ ಸಲ್ಲಿಸಿಸುತ್ತೇನೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಲಿಕೆಯ ಪ್ರತಿಪಕ್ಷಗಳಾದ ಜಿಜೆಪಿ– ಕಾಂಗ್ರೆಸ್‌ನವರ ಸಹಕಾರದೊಂದಿಗೆ ದೆಹಲಿ ಅಭಿವೃದ್ಧಿಗಾಗಿ ಉತ್ತಮ ಆಡಳಿತ ನಡೆಸಲಾಗುವುದು ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು