ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪರಾಷ್ಟ್ರಪತಿ ಚುನಾವಣೆ: ಶೇ 93ರಷ್ಟು ಮತದಾನ, ಮತ ಎಣಿಕೆ ಆರಂಭ

Last Updated 6 ಆಗಸ್ಟ್ 2022, 13:35 IST
ಅಕ್ಷರ ಗಾತ್ರ

ನವದೆಹಲಿ: ಬೆಳಿಗ್ಗೆ 10 ಗಂಟೆಯಿಂದ 5 ಗಂಟೆವರೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಸಂಸತ್ ಭವನದಲ್ಲಿ ಆರಂಭವಾಗಿದೆ.

ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್(71) ಮತ್ತು ವಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವಾ(80) ಕಣದಲ್ಲಿದ್ದಾರೆ.

ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.

ಶೇ 93ರಷ್ಟು ಮತದಾನ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಶೇಕಡ 93ರಷ್ಟು ಮತದಾನವಾಗಿದ್ದು, 50ಕ್ಕೂ ಅಧಿಕ ಸಂಸದರು ಮತದಾನದಿಂದ ದೂರ ಉಳಿದಿದ್ದರು.

ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಒಟ್ಟು 780 ಸಂಸದರಿದ್ದು, ಸಂಜೆ 5 ಗಂಟೆ ವೇಳೆಗೆ 725 ಮಂದಿ ಮತದಾನ ಮಾಡಿದ್ದರು ಎಂದು ವರದಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬೆಳಿಗ್ಗೆಯೇ ಮತದಾನ ಮಾಡಿದರು.

23 ಲೋಕಸಭಾ ಸದಸ್ಯರು ಸೇರಿ ಟಿಎಂಸಿಯ 39 ಸಂಸದರು ಮತದಾನ ಮಾಡಲಿಲ್ಲ.

ಬಿಜೆಪಿಯು ಲೋಕಸಭೆಯಲ್ಲಿ ಸಂಪೂರ್ಣ ಬಹುಮತ ಹೊಂದಿದ್ದು, ರಾಜ್ಯಸಭೆಯಲ್ಲಿ 91 ಸದಸ್ಯರ ಬಲವಿದೆ. ಹೀಗಾಗಿ ಧನಕರ್‌ ಗೆಲ್ಲುವ ಸಾಧ್ಯತೆಗಳು ನಿಚ್ಚಳವಾಗಿವೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿಯು ಆಗಸ್ಟ್ 10 ರಂದು ಕೊನೆಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT