ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದುವೆಗೆ ಒಪ್ಪದ ಕುಟುಂಬಸ್ಥರು: ಯುವ ಜೋಡಿ ಆತ್ಮಹತ್ಯೆ

Last Updated 12 ಮಾರ್ಚ್ 2023, 10:51 IST
ಅಕ್ಷರ ಗಾತ್ರ

ಮುಜಾಫರ್‌ನಗರ(ಉತ್ತರ ಪ್ರದೇಶ): ಮದುವೆಗೆ ಕುಟುಂಬಸ್ಥರು ಒಪ್ಪಿಗೆ ಸಿಗದೇ ಮನನೊಂದ ಯುವ ಜೋಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಮುಜಾಫರನಗರದಲ್ಲಿ ಭಾನುವಾರ ನಡೆದಿದೆ.

ಮೃತರನ್ನು ಪಂಕಜ್ (23) ಮತ್ತು ಶಿವಾನಿ (20) ಎಂದು ಗುರುತಿಸಲಾಗಿದೆ.

ಹುಡುಗಿಯ ಮನೆಯವರು ಮದುವೆ ಕುರಿತು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಪಂಕಜ್ ಮತ್ತು ಶಿವಾನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

‘ಮೃತರಿಬ್ಬರು ದೂರದ ಸಂಬಂಧಿಗಳಾಗಿದ್ದರು. ವಿಷಕಾರಿ ಪದಾರ್ಥಗಳನ್ನು ಸೇವಿಸಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಅಧಿಕಾರಿ ವಿನಯ್ ಕುಮಾರ್ ಗೌತಮ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT