ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಕ್ವೆಲಿನ್ ಫರ್ನಾಂಡಿಸ್ ಜಾಮೀನು ಅರ್ಜಿ ಆದೇಶ ನ.15ಕ್ಕೆ ಮುಂದೂಡಿಕೆ

Last Updated 11 ನವೆಂಬರ್ 2022, 12:45 IST
ಅಕ್ಷರ ಗಾತ್ರ

ನವದೆಹಲಿ:ವಂಚಕ ಸುರೇಶ್‌ ಚಂದ್ರಶೇಖರ್ ಆರೋಪಿಯಾಗಿರುವ ₹ 200 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ಅವರ ಜಾಮೀನು ಅರ್ಜಿಯ ಆದೇಶವನ್ನು ಶುಕ್ರವಾರ ದೆಹಲಿ ನ್ಯಾಯಾಲಯ ನ.15ಕ್ಕೆ ಮುಂದೂಡಿದೆ.

ನ್ಯಾಯಾಲಯವು ಫರ್ನಾಂಡಿಸ್ ಅವರ ಮಧ್ಯಂತರ ಜಾಮೀನು ಅವಧಿಯನ್ನು ಮಂಗಳವಾರದವರೆಗೆ ವಿಸ್ತರಿಸಿದೆ.

ಈ ಹಿಂದೆ ಫರ್ನಾಂಡಿಸ್ ಅವರಿಗೆ ಮಧ್ಯಂತರ ಜಾಮೀನು ನೀಡಿದ್ದ ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್, ಆದೇಶ ಸಿದ್ಧವಾಗಿಲ್ಲ ಎಂದು ಹೇಳಿದರು.

ನಟಿಯ ಪರ ವಕೀಲರು ಮತ್ತು ಜಾರಿ ನಿರ್ದೇಶನಾಲಯದ ವಾದಗಳನ್ನು ಆಲಿಸಿದ ನಂತರ ನ್ಯಾಯಾಲಯವು ಗುರುವಾರ ಆದೇಶವನ್ನು ಕಾಯ್ದಿರಿಸಿತ್ತು.

ವಾದ, ಪ್ರತಿವಾದ ಸಂದರ್ಭದಲ್ಲಿ, ಹಣದ ಕೊರತೆಯಿಲ್ಲದ ಕಾರಣ ಜಾಕ್ವೆಲಿನ್‌ ಸುಲಭವಾಗಿ ದೇಶದಿಂದ ಪರಾರಿಯಾಗಬಹುದು ಎಂಬ ಇ.ಡಿ ಹೇಳಿಕೆಗೆ, ನಟಿಯನ್ನು ಇಲ್ಲಿಯವರೆಗೆ ಏಕೆ ಬಂಧಿಸಿಲ್ಲ ಎಂದು ಕೋರ್ಟ್‌ ಪ್ರಶ್ನಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT