ಮಂಗಳವಾರ, ಮೇ 17, 2022
23 °C

ಸುಲಿಗೆ ಪ್ರಕರಣ: 15ರವರೆಗೆ ಸಚಿನ್‌ ವಾಜೆ ಪೊಲೀಸರ ವಶಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಸುಲಿಗೆ ಆರೋಪದಡಿ ಬಂಧನದಲ್ಲಿರುವ ಮಾಜಿ ಸಹಾಯಕ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಚಿನ್‌ ವಾಜೆ ಅವರ ಪೊಲೀಸ್‌ ಕಸ್ಟಡಿ ಅವಧಿಯನ್ನು ಸ್ಥಳೀಯ ನ್ಯಾಯಾಲಯ ನ.15ರವರೆಗೆ ವಿಸ್ತರಿಸಿದೆ.

ಉದ್ಯಮಿ ಬಿಮಲ್‌ ಅಗರವಾಲ್‌ ಅವರ ದೂರು ಆಧರಿಸಿ ಗೋರೆಗಾವ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮುಂಬೈನ ಮಾಜಿ ಪೊಲೀಸ್‌ ಕಮಿಷನರ್ ಪರಂ ಬೀರ್‌ ಸಿಂಗ್ ಅವರೂ ಆರೋಪಿಯಾಗಿದ್ದಾರೆ. 

ವಾಜೆ ಅವರನ್ನು ಶನಿವಾರ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಹೆಚ್ಚಿನ ತನಿಖೆಗಾಗಿ ತಮ್ಮ ವಶಕ್ಕೆ ಒಪ್ಪಿಸಬೇಕು ಎಂದು ಪೊಲೀಸರು ಮನವಿ ಮಾಡಿದರು. ನ್ಯಾಯಾಲಯ 15ರವರೆಗೆ ಕಸ್ಟಡಿ ಅವಧಿಯನ್ನು ವಿಸ್ತರಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು