ಗುರುವಾರ , ನವೆಂಬರ್ 26, 2020
20 °C

ಚಿನ್ನ ಕಳ್ಳಸಾಗಣೆ: ಏಳು ದಿನಗಳ ಇಡಿ ವಶಕ್ಕೆ ಶಿವಶಂಕರ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಐಎಎಸ್‌ ಅಧಿಕಾರಿ ಎಂ. ಶಿವಶಂಕರ್‌ ಅವರನ್ನು ವಿಚಾರಣೆಗಾಗಿ ನ್ಯಾಯಾಲಯವು ಏಳು ದಿನಗಳ ಕಾಲ ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ನೀಡಿದೆ. 

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ರಾತ್ರಿ ಶಿವಶಂಕರ್ ಅವರನ್ನು ಬಂಧಿಸಿ, ಗುರುವಾರ ಎರ್ನಾಕುಲಂ ಪ್ರಧಾನ ಸೆಷನ್ಸ್‌ ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು.

ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಶಿವಶಂಕರ್ ಅವರ ವಿಚಾರಣೆ ನಡೆಸಲು 14 ದಿನಗಳ ಕಾಲ ವಶಕ್ಕೆ ನೀಡುವಂತೆ ಇಡಿ, ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಏಳು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು