ಗುರುವಾರ , ಅಕ್ಟೋಬರ್ 29, 2020
28 °C

ಡ್ರಗ್ಸ್‌ ಪ್ರಕರಣ: ರಿಯಾ, ಶೋವಿಕ್ ಜಾಮೀನು ಅರ್ಜಿ ವಿಚಾರಣೆಯ ಆದೇಶ ನಾಳೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ನಟ ಸುಶಾಂತ್ ಸಿಂಗ್ ಸಾವಿಗೆ ಸಂಬಂಧಿಸಿರುವ ಡ್ರಗ್ಸ್‌ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋವಿಕ್‌ ಅವರ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಮುಂಬೈನ ವಿಶೇಷ ನ್ಯಾಯಾಲಯ ಶುಕ್ರವಾರ ಹೊರಡಿಸುವ ಸಾಧ್ಯತೆ ಇದೆ.

ನ್ಯಾಯಮೂರ್ತಿ ಜಿ.ಬಿ.ಗೌರವ್ ಅವರು ಗುರುವಾರ ಆರೋಪಿಗಳ ಪರ ವಕೀಲರು ಹಾಗೂ ಸರ್ಕಾರದ ಪರ ಹಾಜರಾದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರ ವಾದಗಳನ್ನು ಆಲಿಸಿದರು. ಇದೇ ವೇಳೆ ಇನ್ನೂ ನಾಲ್ವರು ಆರೋಪಿಗಳ ಜಾಮಿನು ಅರ್ಜಿಗಳ ವಿಚಾರಣೆಯೂ ನಡೆಯಿತು.

ಎಲ್ಲಾ ಜಾಮೀನು ಅರ್ಜಿಗಳ ಕುರಿತ ಆದೇಶವನ್ನು ನ್ಯಾಯಾಲಯ ಶುಕ್ರವಾರ ಹೊರಡಿಸುವ ಸಾಧ್ಯತೆ ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು