ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನನಷ್ಟ ಪ್ರಕರಣ: ಸಂಜಯ್‌ ರಾವುತ್‌ಗೆ ₹ 1,000 ದಂಡ ವಿಧಿಸಿದ ಕೋರ್ಟ್

Last Updated 29 ಮಾರ್ಚ್ 2023, 14:40 IST
ಅಕ್ಷರ ಗಾತ್ರ

ಮುಂಬೈ (‍ಪಿಟಿಐ): ಮೇಧಾ ಸೋಮಯ್ಯ ಎಂಬುವವರು ತಮ್ಮ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಕೋರಿದ ಕಾರಣಕ್ಕಾಗಿ ರಾಜ್ಯಸಭಾ ಸಂಸದ ಸಂಜಯ್‌ ರಾವುತ್‌ ಅವರಿಗೆ ಇಲ್ಲಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಬುಧವಾರ ₹ 1,000 ದಂಡ ವಿಧಿಸಿದೆ.

ರಾವುತ್‌ ಪರ ವಕೀಲರು ಮೇಧಾ ಅವರನ್ನು ಪಾಟಿಸವಾಲಿಗೆ ಒಳಪಡಿಸಲು ದಿನಾಂಕ ನಿಗದಿಪಡಿಸಿದ್ದರು. ಆದರೆ, ‘ರಾವುತ್‌ ಪಾಟಿಸವಾಲಿಗೆ ಸಿದ್ಧರಿಲ್ಲದ ಕಾರಣ ಈ ಪ್ರಕರಣದ ವಿಚಾರಣೆಯನ್ನು ಮುಂದೂಡಬೇಕು’ ಎಂದು ವಕೀಲರು ಮನವಿ ಮಾಡಿಕೊಂಡರು.

ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ (ಸೆವ್ರಿ) ನ್ಯಾಯಾಲಯದ ನ್ಯಾಯಾಧೀಶ ಪಿ.ಐ. ಮೊಕಾಶಿ ಅವರು ವಿಚಾರಣೆಯನ್ನು ಮುಂದೂಡಲು ಒಪ್ಪಿಕೊಂಡರು. ಆದರೆ, ರಾವುತ್‌ ಅವರಿಗೆ ₹ 1,000 ದಂಡ ವಿಧಿಸಿದರು.

ಪ್ರಕರಣದ ಮುಂದಿನ ವಿಚಾರಣೆಯು ಏಪ್ರಿಲ್‌ 10ರಂದು ನಡೆಯಲಿದೆ.

ಮುಂಬೈ ಸಮೀಪದ ಮೀರಾ ಭಾಯಂದರ್ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ತಾನು ಮತ್ತು ತನ್ನ ಪತಿ ₹100 ಕೋಟಿ ಹಗರಣದಲ್ಲಿ ಭಾಗಿಯಾಗಿದ್ದೇವೆ ಎಂದು ರಾವುತ್ ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿದ್ದಾರೆ ಎಂದು ಮೇಧಾ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT