ಶನಿವಾರ, ಮೇ 28, 2022
22 °C

ನವಾಬ್‌ ಮಲಿಕ್‌ಗೆ ತಾತ್ಕಾಲಿಕ ಜಾಮೀನು ನೀಡಲು ನಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ನವಾಬ್‌ ಮಲಿಕ್‌ ಅವರಿಗೆ, ವೈದ್ಯಕೀಯ ಕಾರಣಗಳಿಗಾಗಿ ತಾತ್ಕಾಲಿಕವಾಗಿ ಜಾಮೀನು ನೀಡಲು ಇಲ್ಲಿನ ವಿಶೇಷ ಕೋರ್ಟ್‌ ನಿರಾಕರಿಸಿದೆ. ಆದರೆ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಅನುಮತಿ ನೀಡಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಆರ್‌. ಎನ್‌. ರೋಕಡೆ ಅವರು, ಚಿಕಿತ್ಸೆ ವೇಳೆ ಮಲಿಕ್‌ ಪುತ್ರಿ ಹಾಜರಿರಬಹುದು ಎಂದು ತಿಳಿಸಿದರು. ಮಲಿಕ್‌ ಅವರನ್ನು ಚಿಕಿತ್ಸೆಗೆ ಕರೆದೊಯ್ಯದಿರುವುದಕ್ಕೆ ಜಾರಿ ನಿರ್ದೇಶನಾಲಯವನ್ನು (ಇಡಿ) ತರಾಟೆಗೆ ತೆಗೆದುಕೊಂಡರು.

ಭೂಗತಪಾತಕಿ ದಾವೂದ್‌ ಇಬ್ರಾಹಿಂ ಹಾಗೂ ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಫೆಬ್ರುವರಿ 23ರಂದು ನವಾಬ್‌ ಮಲಿಕ್ ಅವರನ್ನು ಬಂಧಿಸಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು