ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೇಜಸ್ವಿ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್‌

Last Updated 18 ಅಕ್ಟೋಬರ್ 2022, 12:18 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರ ಉಪಮುಖ್ಯಮಂತ್ರಿ ಹಾಗೂ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್‌ ಅವರಿಗೆ ಐಆರ್‌ಸಿಟಿಸಿ ಹಗರಣ ಸಂಬಂಧ ನೀಡಿರುವ ಜಾಮೀನನ್ನು ರದ್ದುಗೊಳಿಸಬೇಕು ಎಂದು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಮಂಗಳವಾರ ತಿರಸ್ಕರಿಸಿದೆ.

‘ತೇಜಸ್ವಿ ಯಾದವ್‌ಇತ್ತೀಚೆಗೆ ನಡೆಸಿದ ಪತ್ರಿಕಾಗೋಷ್ಠಿವೊಂದರಲ್ಲಿ ಮಾತನಾಡುತ್ತಾ, ಕಾನೂನು ಪಕ್ರಿಯೆಯನ್ನು ಹಾಗೂ ಸಂಪೂರ್ಣ ತನಿಖೆಯನ್ನು ಬುಡಮೇಲು ಮಾಡುವಂಥ ಮಾತುಗಳನ್ನಾಡಿದ್ದಾರೆ. ಯಾದವ್‌ ಅವರು ತಮಗೆ ನೀಡಿರುವ ಸ್ವಾತಂತ್ರ್ಯವನ್ನು ನಿರ್ಲಜ್ಜವಾಗಿ ಬಳಸಿಕೊಂಡಿದ್ದಾರೆ’ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ಆರೋಪಿಸಿತ್ತು.

‘ತೇಜಸ್ವಿ ಯಾದವ್‌ ಅವರು ವಿರೋಧ ಪಕ್ಷದಲ್ಲಿದ್ದಾರೆ. ಸರ್ಕಾರದ ತಪ್ಪುಗಳ ಬಗ್ಗೆ ಪ್ರಶ್ನೆ ಕೇಳುವುದು ಅವರ ಕರ್ತವ್ಯ. ಕೇಂದ್ರ ಸರ್ಕಾರವು ಸಿಬಿಐ ಮತ್ತು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವುದು ಅವರ ಅಭಿಪ್ರಾಯವಾಗಿದೆ. ಎಲ್ಲಾ ವಿರೋಧ ಪಕ್ಷಗಳಲ್ಲೂ ಇದೇ ಅಭಿಪ್ರಾಯವಿದೆ. ಜಾಮೀನು ಷರತ್ತುಗಳನ್ನು ಅವರು ಉಲ್ಲಂಘಿಸಿಲ್ಲ’ ಎಂದು ಯಾದವ್‌ ಪರ ವಕೀಲ ನ್ಯಾಯಾಲಯಕ್ಕೆ ಹೇಳಿದರು.

‘ಮಾತನಾಡುವ ವೇಳೆ ಎಚ್ಚರ ವಹಿಸಬೇಕು’ ಎಂದು ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಜೋಯೆಲ್‌ ಅವರು ತೇಜಸ್ವಿ ಯಾದವ್‌ ಅವರಿಗೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT