ಶುಕ್ರವಾರ, ಅಕ್ಟೋಬರ್ 23, 2020
21 °C

ದೆಹಲಿಗೆ ತೆರಳಲು ಅನುಮತಿ ಕೋರಿ ಹಾರ್ದಿಕ್‌ ಮನವಿ: ಅರ್ಜಿ ತಿರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್‌: ಹನ್ನೆರಡು ದಿನ ಗುಜರಾತ್‌ನಿಂದ ಹೊರಗೆ ಪ್ರಯಾಣ ಬೆಳೆಸಲು ಅವಕಾಶ ಕಲ್ಪಿಸುವಂತೆ ಕಾಂಗ್ರೆಸ್‌ ನಾಯಕ ಹಾರ್ದಿಕ್‌ ಪಟೇಲ್ ಮಾಡಿದ ಮನವಿಯನ್ನು ಸೆಷನ್ಸ್‌ ಕೋರ್ಟ್‌ ತಿರಸ್ಕರಿಸಿದೆ.

ದೆಹಲಿಯಲ್ಲಿ ನಡೆಯುವ ರಾಜಕೀಯ ಸಭೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಅವರು ಮನವಿ ಮಾಡಿದ್ದರು. 

2015ರಲ್ಲಿ ದಾಖಲಾಗಿದ್ದ ದೇಶದ್ರೋಹ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗದ ಕಾರಣ  ಹಾರ್ದಿಕ್‌ ಅವರನ್ನು‌‌ ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ಗುಜರಾತ್‌ನಿಂದ ಹೊರಹೋಗದಂತೆ ನಿರ್ಬಂಧ ವಿಧಿಸಲಾಗಿದೆ. 

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಬಿ.ಜೆ. ಗಣತ್ರಾ ಅರ್ಜಿ ವಿಚಾರಣೆಗೆ ನಿರಾಕರಿಸಿದ್ದು, ‘ಕೊರೊನಾ ಸೋಂಕು ಭಾರತದಾದ್ಯಂತ ವ್ಯಾಪಕವಾಗುತ್ತಿರುವ ಈ ಸಂದರ್ಭದಲ್ಲಿ, ರಾಜಕೀಯ ಅಥವಾ ಸಾಮಾಜಿಕ ಸಭೆಗಳನ್ನು ಆನ್‌ಲೈನ್‌ ಮೂಲಕವೂ ನಡೆಸಬಹುದು. ಅರ್ಜಿದಾರರ ಕೋರಿಕೆ ಸಮಂಜಸವಾಗಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು