ಸೋಮವಾರ, ಸೆಪ್ಟೆಂಬರ್ 20, 2021
24 °C

ಡ್ರಗ್ಸ್: ಬಾಲಿವುಡ್ ನಟ ಅರ್ಮಾನ್ ಕೊಹ್ಲಿ 14 ದಿನ ನ್ಯಾಯಾಂಗ ಬಂಧನಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ದಳದಿಂದ (ಎನ್‌ಸಿಬಿ) ಬಂಧನಕ್ಕೆ ಒಳಗಾಗಿರುವ ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ಅವರನ್ನು ಎನ್‌ಸಿಬಿ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಅರ್ಮಾನ್ ಕೊಹ್ಲಿ ಅವರ ಮುಂಬೈ ನಿವಾಸದ ಮೇಲೆ ಕಳೆದ ಶನಿವಾರ ಸಂಜೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅವರ ಮನೆಯಲ್ಲಿ ಕೊಕೇನ್ ಪತ್ತೆಯಾಗಿತ್ತು. ಮರುದಿನವೇ ಅವರ ಬಂಧನವಾಗಿತ್ತು. ಅಲ್ಲದೇ ಅವರು ಅಂತರರಾಷ್ಟ್ರೀಯ ಡ್ರಗ್ಸ್‌ ಪೆಡ್ಲರ್‌ಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ.

ಶುಕ್ರವಾರ ಕಿರುತೆರೆ ನಟ ಗೌರವ್ ದೀಕ್ಷಿತ್ ಅವರನ್ನು ಕೇಂದ್ರ ಮಾದಕ ವಸ್ತು ನಿಯಂತ್ರಣ ದಳ ಬಂಧಿಸಿತ್ತು. ಇದರ ಮುಂದುವರಿದ ಭಾಗವಾಗಿ ಅರ್ಮಾನ್ ಕೊಹ್ಲಿ ಅವರ ನಿವಾಸದ ಮೇಲೆ ದಾಳಿ ನಡೆದಿತ್ತು.

ಅರ್ಮಾನ್, ಸಲ್ಮಾನ್ ಖಾನ್ ಅಭಿನಯದ 'ಪ್ರೇಮ್ ರತನ್ ಧನ ಪಾಯೋ' ಸಿನಿಮಾ ಸೇರಿದಂತೆ ಅನೇಕ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಿಂದಿಯ ಬಿಗ್‌ಬಾಸ್‌ನಲ್ಲೂ ಭಾಗವಹಿಸಿದ್ದರು.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು